HEALTH TIPS

ಪಾಕಿಸ್ತಾನ| ಪೊಲೀಸ್ ಚೌಕಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 15 ಮಂದಿ ಭದ್ರತಾ ಸಿಬ್ಬಂದಿ ಮೃತ್ಯು; ಹಲವರಿಗೆ ಗಾಯ

ಪೇಷಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಕ್ವಾ ಪ್ರಾಂತದಲ್ಲಿ ಪೊಲೀಸ್ ಚೌಕಿಯ ಮೇಲೆ ಶನಿವಾರ ರಾತ್ರಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 15 ಮಂದಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಇತರ ಹಲವರು ಗಾಯಗೊಂಡಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.

ವಾಯವ್ಯದ ಜಿಲ್ಲೆ ಬನ್ನುವಿನ ಫತೇಹ್ ಖೇಲ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ್ದ ವಾಹನವನ್ನು ಪೊಲೀಸ್ ಚೌಕಿಯತ್ತ ನುಗ್ಗಿಸಿದ್ದಾನೆ. ವಾಹನದ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ಸ್ಫೋಟ ಸಂಭವಿಸಿದ್ದು ಸ್ಫೋಟದ ತೀವ್ರತೆಗೆ ಈ ಪ್ರದೇಶದ ಹಲವು ಮನೆಗಳ ಛಾವಣಿ ಕುಸಿದುಬಿದ್ದಿದೆ. ಪೊಲೀಸ್ ಚೌಕಿಯ ಕಟ್ಟಡವೂ ನೆಲಸಮಗೊಂಡಿದ್ದು ಕುಸಿದು ಬಿದ್ದ ಕಟ್ಟಡದ ಅವಶೇಷಗಳಡಿ ಹಲವು ಭದ್ರತಾ ಸಿಬ್ಬಂದಿ ಹೂತುಹೋದರು.

ಸ್ಫೋಟದ ಬಳಿಕ ಭಯೋತ್ಪಾದಕರ ದೊಡ್ಡ ಗುಂಪೊಂದು ಪೊಲೀಸ್ ಚೌಕಿಯತ್ತ ಗುಂಡಿನ ದಾಳಿ ಪ್ರಾರಂಭಿಸಿದ್ದು ಭದ್ರತಾ ಸಿಬ್ಬಂದಿ ಪ್ರತ್ಯುತ್ತರ ನೀಡಿದಾಗ ಭಾರೀ ಗುಂಡಿನ ಚಕಮಕಿ ನಡೆದಿದೆ. ಇದುವರೆಗೆ ಯಾವುದೇ ಗುಂಪು ದಾಳಿಯ ಹೊಣೆ ವಹಿಸಿಕೊಂಡಿಲ್ಲ ಎಂದು ಬನ್ನು ಪೊಲೀಸ್ ವಕ್ತಾರರನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಯೋತ್ಪಾದಕರು ಭಾರೀ ಶಸ್ತ್ರಾಸ್ತ್ರಗಳ ಜೊತೆಗೆ ಡ್ರೋನ್ ಮೂಲಕವೂ ದಾಳಿ ನಡೆಸಿದ್ದಾರೆ. ದಾಳಿಯ ಬಳಿಕ ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಿದ್ದಾರೆ ಮತ್ತು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries