HEALTH TIPS

ಸೆಮಿಕಂಡೆಕ್ಟರ್, ಕ್ವಾಂಟಮ್ ಸೇರಿ 17 ಒಪ್ಪಂದಗಳಿಗೆ ಭಾರತ-ನದೆರ್ಲೆಂಡ್ಸ್ ಸಹಿ

 ದಿ ಹೇಗ್‌: ಭಾರತ ಮತ್ತು ನೆದರ್ಲೆಂಡ್ಸ್‌ ನಡುವೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಗೊಳಿಸಲು ರಕ್ಷಣಾ, ನಿರ್ಣಾಯಕ ಖನಿಜಗಳು ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ವೃದ್ಧಿಸಲು 17 ಒಪ್ಪಂದಗಳಿಗೆ ಸಹಿ ಮಾಡಿದೆ. 


ಎರಡೂ ದೇಶಗಳ ನಡುವೆ ವ್ಯಾಪಾರ, ಹೂಡಿಕೆ, ಭದ್ರತೆ, ಸೆಮಿಕಂಡಕ್ಟರ್‌, ಬಾಹ್ಯಾಕಾಶ, ಕ್ವಾಂಟಮ್‌ ಕಂಪ್ಯೂಟಿಂಗ್‌ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಬಂಧ ವೃದ್ಧಿಸುವ ಉದ್ದೇಶವನ್ನು ಈ ಒಪ್ಪಂದಗಳು ಹೊಂದಿವೆ.

ಭಾರತದ ಮಹತ್ವಾಕಾಂಕ್ಷೆ ಸೀಮಾತೀತ: ಮೋದಿ

ನೆದರ್ಲೆಂಡ್ಸ್‌, ಸ್ವೀಡನ್‌, ನಾರ್ವೆ, ಇಟಲಿ ದೇಶಗಳಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲೆಂಡ್ಸ್‌ ಪ್ರಧಾನಿ ರಾಬ್‌ ಜೆಟ್ಟೆನ್‌ ಅವರ ಜತೆ ಮಾತುಕತೆ ನಡೆಸಿದ ಬಳಿಕ ಈ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

ಇಬ್ಬರೂ ನಾಯಕರು ಮಾತುಕತೆ ವೇಳೆ ಪಶ್ಚಿಮ ಏಷ್ಯಾದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ, ತೀವ್ರ ಕಳವಳ ವ್ಯಕ್ತಪಡಿಸಿದರು. ಪಶ್ಚಿಮ ಏಷ್ಯಾದಲ್ಲಿನ ಯುದ್ಧದಲ್ಲಿ ಜಾಗತಿಕ ಇಂಧನ ಪೂರೈಕೆ ಸರಪಳಿ ಮತ್ತು ವ್ಯಾಪಾರ ಜಾಲಕ್ಕೆ ಹೊಡೆತ ಬಿದ್ದಿರುವ ಕುರಿತು ಚರ್ಚಿಸಿದರು.

ಹೊರ್ಮುಜ್‌ ಜಲಸಂಧಿಯಲ್ಲಿ ಯಾವುದೇ ನಿರ್ಬಂಧಗಳಿಲ್ಲದೆ, ಮುಕ್ತ ಸಂಚಾರಕ್ಕೆ ಅವಕಾಶ ಇರಬೇಕು ಎಂದು ಉಭಯ ನಾಯಕರು ಪ್ರತಿಪಾದಿಸಿದರು.

ಇದೇ ವೇಳೆ ಇಬ್ಬರೂ ನಾಯಕರು ಉಕ್ರೇನ್‌-ರಷ್ಯಾ ಯುದ್ಧ ಮತ್ತು ಅಲ್ಲಿನ ಸ್ಥಿತಿಗತಿಗಳು ಮತ್ತು ಪ್ರಾದೇಶಿಕ ಭದ್ರತೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.

ವಿಶ್ವಸಂಸ್ಥೆಯ ಚಾರ್ಟರ್‌, ಅಂತರರಾಷ್ಟ್ರೀಯ ಕಾನೂನಿನ ಅನ್ವಯ ಉಕ್ರೇನ್‌ ಮತ್ತು ರಷ್ಯಾ ನಡುವೆ ರಾಜತಾಂತ್ರಿಕ ಮಾರ್ಗಗಳ ಮೂಲಕ ಸಂವಾದ ನಡೆಯಬೇಕು. ಈ ನಿಟ್ಟಿನಲ್ಲಿ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿ ಸ್ಥಾಪನೆಗೆ ನಡೆಯುವ ಪ್ರಯತ್ನಗಳಿಗೆ ಬೆಂಬಲಿಸುವುದಾಗಿ ಇಬ್ಬರೂ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎರಡೂ ದೇಶಗಳು ಸಾಗಬೇಕಾದ ಗುರಿ, ಉದ್ದೇಶಗಳ ಕುರಿತ ಯೋಜನೆಯನ್ನು ಈ ವೇಳೆ ಅನಾವರಣಗೊಳಿಸಲಾಯಿತು. ತಂತ್ರಜ್ಞಾನ ವರ್ಗಾವಣೆ, ಜಂಟಿ ಉದ್ಯಮಗಳ ಸ್ಥಾಪನೆ ಮೂಲಕ ರಕ್ಷಣಾ ಉಪಕರಣಗಳು, ಘಟಕಗಳು ಮತ್ತು ಇತರ ಮಹತ್ವದ ಸಾಮರ್ಥ್ಯಗಳ ಜಂಟಿ ಉತ್ಪಾದನೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ ಎಂದು ನಾಯಕರ ಪ್ರತಿಪಾದಿಸಿದರು.

ನೆದರ್ಲೆಂಡ್ಸ್‌ ಐರೋಪ್ಯ ದೇಶಗಳ ಪೈಕಿ ಭಾರತಕ್ಕೆ ನಾಲ್ಕನೇ ಅತಿದೊಡ್ಡ ಹೂಡಿಕೆದಾರ ದೇಶವಾಗಿದ್ದು, 55.6 ಬಿಲಿಯನ್‌ ಡಾಲರ್‌ ವಿದೇಶಿ ನೇರ ಹೂಡಿಕೆ ಹೊಂದಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವಕ್ಕಾಗಿ ಬೆಂಬಲ ನೀಡಿದ ನೆದರ್ಲೆಂಡ್ಸ್‌ಗೆ ಪ್ರಧಾನಿ ಮೋದಿ ಇದೇ ವೇಳೆ ಧನ್ಯವಾದ ಹೇಳಿದರು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries