ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಈ ಹೊಸ ನಿಯಮವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ ಮತ್ತು ಸಂಸ್ಕರಿಸಿದ ಸಕ್ಕರೆಯ ರಫ್ತಿನ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಜಾಗತಿಕವಾಗಿ ಸಕ್ಕರೆ ಬೆಲೆಯಲ್ಲಿ ಏರಿಕೆ
ದೇಶದಲ್ಲಿ ಸಕ್ಕರೆ ಉತ್ಪಾದನೆಯು ಈ ಬಾರಿ ನಿರೀಕ್ಷಿತ ಮಟ್ಟಕ್ಕಿಂತ ಕಡಿಮೆ ಇರುವ ಆತಂಕವಿದೆ. ಮತ್ತು ಎಲ್ ನಿನೋ ಪರಿಣಾಮದಿಂದಾಗಿ ಕಬ್ಬಿನ ಇಳುವರಿ ಕುಂಠಿತಗೊಳ್ಳುವ ಸಾಧ್ಯತೆ ಇರುವುದರಿಂದ ಸರ್ಕಾರ ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಕಳೆದ ಕೆಲವು ವರ್ಷಗಳಿಂದ ಜಾಗತಿಕವಾಗಿ ಸಕ್ಕರೆ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದೆ.ಭಾರತದ ಈ ನಿರ್ಧಾರವು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಬೆಲೆ ಮತ್ತಷ್ಟು ಹೆಚ್ಚಾಗಲು ಕಾರಣವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬ್ರೆಜಿಲ್ ನಂತರ ವಿಶ್ವದ ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿರುವ ಭಾರತದ ಈ ರಫ್ತು ತಡೆ ನಿರ್ಧಾರವು ಥೈಲ್ಯಾಂಡ್ ಮತ್ತು ಬ್ರೆಜಿಲ್‌ನಂತಹ ಇತರ ರಫ್ತುದಾರರಿಗೆ ಹೆಚ್ಚಿನ ಅವಕಾಶ ನೀಡಲಿದೆ.
ಕೆಲವು ವಿನಾಯಿತಿಗಳು
ಇತರ ದೇಶಗಳ ಆಹಾರ ಭದ್ರತೆಯ ಅಗತ್ಯತೆಗಳನ್ನು ಪೂರೈಸಲು ಆಯಾ ದೇಶಗಳ ಸರ್ಕಾರಗಳ ಮನವಿಯ ಮೇರೆಗೆ ವಿಶೇಷ ಅನುಮತಿಯೊಂದಿಗೆ ಸಕ್ಕರೆ ರಫ್ತು ಮಾಡಲು ಭಾರತ ಸರ್ಕಾರ ನಿರ್ಧರಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ. ಈ ಕ್ರಮದಿಂದಾಗಿ ಹಬ್ಬಗಳ ಸಂದರ್ಭದಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಜನಸಾಮಾನ್ಯರಿಗೆ ಹೊರೆಯಾಗದಂತೆ ನಿಯಂತ್ರಣದಲ್ಲಿಡಲು ಸಾಧ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಮುಂದಿನ ಪರಿಣಾಮಗಳು:

