HEALTH TIPS

ಜೂನ್ 21ರಂದು ನೀಟ್-ಯುಜಿ 2026 ಮರು ಪರೀಕ್ಷೆ

 ವದೆಹಲಿ: ವೈದ್ಯಕೀಯ ಪದವಿ ಕೋರ್ಸ್‌ಗಳ ರಾಷ್ಟ್ರೀಯ ಅರ್ಹತಾ ಪ್ರವೇಶದ ಮರು ಪರೀಕ್ಷೆಯು (ನೀಟ್-ಯುಜಿ) ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತಿಳಿಸಿದೆ. 

ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು 2026ರ ಜೂನ್ 21, ಭಾನುವಾರದಂದು ನಿಗದಿಪಡಿಸಲಾಗಿದೆ. 


ಅಧಿಕೃತ ಚಾನಲ್‌ಗಳ ಮೂಲಕವೇ ಅಭ್ಯರ್ಥಿಗಳು ಹಾಗೂ ಪೋಷಕರು ಮಾಹಿತಿ ಪಡೆದುಕೊಳ್ಳಬೇಕು ಎಂದು ವಿನಂತಿಸಿದೆ.

ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಮೇ 3ರಂದು ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಕಾರಣ ಆ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿತ್ತು.

ಅಲ್ಲದೆ ನೀಟ್ ಯುಜಿ ಪರೀಕ್ಷೆ ಅಕ್ರಮದ ಕುರಿತು ತನಿಖೆ ನಡೆಸುವಂತೆ ಸಿಬಿಐ ಅನ್ನು ಕೋರಿತ್ತು. ಇದರ ಬೆನ್ನಲ್ಲೇ ಪ್ರಶ್ನೆ ಪ್ರತ್ರಿಕೆ ಸೋರಿಕೆ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗಳು ನಡೆದಿದ್ದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries