HEALTH TIPS

ನೀಟ್‌ ಅಕ್ರಮ, ಬೆಲೆ ಏರಿಕೆ ವಿರುದ್ಧ ಹೋರಾಟ 21ಕ್ಕೆ

ಮವದೆಹಲಿ: ಕ್ರಮ, ದಿನ ಬಳಕೆ ಸಾಮಗ್ರಿಗಳ ಬೆಲೆ ಏರಿಕೆ ವಿರೋಧಿಸಿ ಮೇ 21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ' ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್‌ ಭೀಮಾನಾಯ್ಕ್ ತಿಳಿಸಿದರು.

ಭಾನುವಾರ ಇಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, 'ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಈ ಪ್ರತಿಭಟನೆ ಮೂಲಕ ಕೇಂದ್ರಕ್ಕೆ ರವಾನಿಸಲಾಗುವುದು' ಎಂದು ಹೇಳಿದರು.

'ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನೀಟ್ ಪರೀಕ್ಷೆ ಅಕ್ರಮ ತಡೆಗೆ ಕಠಿಣ ಕಾನೂನು ರೂಪಿಸಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕೇ ಹೊರತು ಆತ್ಮಹತ್ಯೆ ಪರಿಹಾರವಲ್ಲ' ಎಂದು ಹೇಳಿದರು.

ಹೊಸಪೇಟೆ ಘಟಕದ ಅಧ್ಯಕ್ಷ ಹರೂನ್ ಶೇಖ್ ಮಾತನಾಡಿ, 'ಪಕ್ಷದ ಬಲವರ್ಧನೆಯಲ್ಲಿ ಯುವ ಕಾರ್ಯಕರ್ತರು ತೊಡಗಿಕೊಳ್ಳಬೇಕು. ಪಕ್ಷದ ತತ್ವ-ಸಿದ್ಧಾಂತಗಳನ್ನು ಯುವಜನರಿಗೆ ತಿಳಿಸಬೇಕಿದೆ' ಎಂದರು.

ಜಿಲ್ಲಾ ಉಸ್ತುವಾರಿ ಅಬು ತಾಯರ್, ಉಪಾಧ್ಯಕ್ಷ ನಾಗರಾಜ್ ಬಡಲಡಿಕಿ, ಹೊಸಪೇಟೆ ಬ್ಲಾಕ್ ಅಧ್ಯಕ್ಷ ಪ್ರದೀಪ್, ಕಮಲಾಪುರ ಬ್ಲಾಕ್ ಅಧ್ಯಕ್ಷ ಗೌಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಶೇಖ್, ಕಾನೂನು ಘಟಕದ ಅಧ್ಯಕ್ಷ ಅಜಾದ್, ಗಣೇಶ್ ಪಾಟೀಲ ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries