HEALTH TIPS

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 26 ಸಾವು, 61 ಮಂದಿಗೆ ಗಾಯ

 ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 26 ಮಂದಿ ಮೃತಪಟ್ಟಿದ್ದು, 61ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಗುವಾಂಡು ಪಟ್ಟಣದಲ್ಲಿರುವ ಲಿಯುಯಾಂಗ್ ಹುವಾಶೆಂಗ್ ಪಟಾಕಿ ತಯಾರಿಕಾ ಘಟಕದಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡ ನೆಲಸಮವಾಗಿದ್ದು, ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿತ್ತು.

ಇನ್ನು, ಈ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಇತ್ತೀಚೆಗಷ್ಟೇ ತಮಿಳುನಾಡಿನ ಪಟಾಕಿ ಘಟಕವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಮಂದಿ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries