ಉಪ್ಪಳ: ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಗಣಿತ (ಜೂನಿಯರ್), ಉರ್ದು (ಜೂನಿಯರ್)ಅಧ್ಯಾಪಕ ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ಅಧ್ಯಾಪಕರ ಆಯ್ಕೆಗಾಗಿ ಸಂದರ್ಶನ ಮೇ 29ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣಪತ್ರದೊಂದಿಗೆ ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು. ಈ ಬಗ್ಗೆ ಮಾಹಿತಿಗೆ ಮೊಬೈಲ್ ಸಂಖ್ಯೆ(9964142229)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


