HEALTH TIPS

ಅಸ್ಸಾಂ: ಸತತ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಆಯ್ಕೆ

 ಗುವಾಹಟಿ: ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. 


ಈ ಕುರಿತು ಕೇಂದ್ರ ಸಚಿವ ಜೆ.ಪಿ. ನಡ್ಡಾ ಮಾಹಿತಿ ನೀಡಿದ್ದು, 'ಬಿಜೆಪಿಯ ಎಂಟು ಶಾಸಕರು ಶರ್ಮಾ ಅವರನ್ನು ನಾಯಕರನ್ನಾಗಿ ಪ್ರತಿಪಾದಿಸಿದ್ದಾರೆ' ಎಂದು ತಿಳಿಸಿದ್ದಾರೆ.

ಇದನ್ನೂ ಮುನ್ನ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲೂ ಶರ್ಮಾ ಅವರನ್ನು ನಾಯಕರನ್ನಾಗಿ ಆರಿಸಲಾಯಿತು. ಜೆ.ಪಿ. ನಡ್ಡಾ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹಾಗೂ ಕೇಂದ್ರ ವೀಕ್ಷಕರು ಸಭೆಯಲ್ಲಿ ಹಾಜರಿದ್ದರು.

ಬಿಜೆಪಿ ಮೈತ್ರಿ ಪಕ್ಷಗಳಾದ ಅಸ್ಸಾಂ ಗಣ ಪರಿಷದ್‌ (ಎಜಿಪಿ) ಹಾಗೂ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್‌ (ಬಿಪಿಎಫ್‌) ಸಹ ಹಿಮಂತ ಬಿಸ್ವಾ ಶರ್ಮಾ ಅವರ ನಾಮನಿರ್ದೇಶನವನ್ನು ಬೆಂಬಲಿಸಿದೆ. ಇದರಿಂದ ಸರ್ವಾನುಮತದಿಂದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನೂತನ ಸರ್ಕಾರದ ಹಕ್ಕು ಮಂಡನೆ ಹಾಗೂ ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಭಾನುವಾರವೇ ಲೋಕಭನವದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಮೇ 12ರಂದು ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

ಇತ್ತೀಚೆಗೆ ನಡೆದ ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಸಲ ಗೆಲುವು ದಾಖಲಿಸಿತ್ತು. 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 82, ಮಿತ್ರಪಕ್ಷಗಳಾದ ಎಜಿಪಿ ಹಾಗೂ ಬಿಪಿಎಫ್ ತಲಾ 10 ಸ್ಥಾನಗಳಲ್ಲಿ ಜಯಿಸಿತ್ತು. 










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries