ಕುಂಬಳೆ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ ಹಾಗೂ ಶಾಫಿ ಬಂಡಸಾಲೆ ದುಬೈ ಅವರ 'ಮನದ ಮಾತು'ಕೃತಿ ಪರಿಚಯ ಸಮಾರಂಭ ಮೇ 30ರಂದು ಬೆಳಗ್ಗೆ 10ಕ್ಕೆ ಉಪ್ಪಳ ವ್ಯಾಪಾರಿ ಭವನದಲ್ಲಿ ಜರುಗಲಿದೆ.
ಮಂಗಳೂರು ಮೆಸ್ಕಾಂ ಅಧ್ಯಕ್ಷ, ಮಾಜಿ ಶಾಸಕ ಕೆ. ಹರೀಶ್ ಕುಮಾರ್ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸುವರು. ಈ ಸಂದರ್ಭ ಲೇಖಕ ಶಾಫಿ ಬಂಡಸಾಲೆ ಅವರನ್ನು ಗೌರವಿಸಲಾಗುವುದು. ಶಾಸಕ ಎ.ಕೆ.ಎಂ ಅಶ್ರಫ್ ಸನ್ಮಾನಿಸುವರು. ಕೆಯೂಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಕೃತಿ ಪರಿಚಯ ನಡೆಸುವರು.
ಮಂಗಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಲ್ಡನ್ ರಹಮಾನ್, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಮಕ ಕಲಾ ಪರಿಷತ್ತು, ಕಾಸರಗೋಡು ತೆಕ್ಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತೆ ಸುಜಾತಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.



