ನವದೆಹಲಿ: ಈಶಾನ್ಯ ಭಾರತದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 60 ಟನ್ ವಿದೇಶಿ ಮೂಲದ ಅಡಿಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ವಶಪಡಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಶುಕ್ರವಾರ ತಿಳಿಸಿದೆ.
ಮಿಜೋರಾಂ ಮತ್ತು ಅಸ್ಸಾಂನಲ್ಲಿ ಡಿಆರ್‌ಐ ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಂಡಿದೆ. ಆರಂಭಿಕ ಹಂತದ ತನಿಖೆಯಲ್ಲಿ ಮ್ಯಾನ್ಮಾರ್ ಮತ್ತು ಮಿಜೋರಾಂ ಗಡಿಯ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ನೆರೆಯ ದೇಶಗಳಿಂದ ಅಕ್ರಮವಾಗಿ ಸಾಗಣೆ ಆಗುವ ಈ ಅಡಿಕೆಯಿಂದ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವುದಲ್ಲದೆ, ಅಡಿಕೆ ಬೆಳೆಗಾರರಿಗೆ ತೊಂದರೆ ಆಗಲಿದೆ.

