ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ, ಪುಣೆ ಮೂಲದ ಭೌತಶಾಸ್ತ್ರ ಉಪನ್ಯಾಸಕಿ ಮನೀಷಾ ಸಂಜಯ್ ಹವಾಲ್ದಾರ್ ಅವರನ್ನು ಆರು ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಿ ದೆಹಲಿ ನ್ಯಾಯಾಲಯವು ಆದೇಶ ಹೊರಡಿಸಿದೆ.
ಆರೋಪಿಗಳನ್ನು ಆರು ದಿನಗಳ ವಿಚಾರಣೆಗೆ ಒಳಪಡಿಸುವಂತೆ ಕೋರಿ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ವಿಶೇಷ ನ್ಯಾಯಾಧೀಶ ಅಜಯ್ ಗುಪ್ತಾ, ಅದಕ್ಕೆ ಅನುಮತಿ ನೀಡಿದ್ದಾರೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಪ್ರಶ್ನೆ ಪತ್ರಿಕೆ ಅನುವಾದಕರಾಗಿ ಕೆಲಸ ಮಾಡುತ್ತಿದ್ದ ಹವಾಲ್ದಾರ್, ಇತರ ಆರೋಪಿಗಳೊಂದಿಗೆ ಸೇರಿಕೊಂಡು ಅನುವಾದಕ್ಕಾಗಿ ಬಂದ ಭೌತಶಾಸ್ತ್ರದ ಪ್ರಶ್ನೆಗಳನ್ನು ಪ್ರಸಾರ ಮಾಡಿದ್ದಾರೆ ಎಂದು ವಿಚಾರಣೆಯ ಸಮಯದಲ್ಲಿ ಸಿಬಿಐ ತಿಳಿಸಿದೆ.
ಪುಣೆಯ ಸೇಠ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಹವಾಲ್ದಾರ್ ಕೆಲಸ ಮಾಡುತ್ತಿದ್ದ ಹವಾಲ್ದಾರ್ ಅವರನ್ನು , ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 22ರಂದು ಬಂಧಿಸಲಾಗಿದೆ ಎಂದು ಹೇಳಿದೆ.

