HEALTH TIPS

ಪುಣೆ: ಇದ್ದಕ್ಕಿಂದ್ದಂತೆ ಸ್ಥಗಿತ; ಒಂದೂವರೆ ಗಂಟೆ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ 7 ವರ್ಷದ ಬಾಲಕ ಸಾವು!

 ಪುಣೆ: ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಸಾವಿಗೀಡಾದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 


ಮೃತ ಮಗುವನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದ್ದು, ನಿಂಬಾಜಿನಗರದ ರಿದ್ಧಿ ಸಿದ್ಧಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಶಿವಾಂಶ್ ಎಂದಿನಂತೆ ರಾತ್ರಿ 10 ಗಂಟೆ ಸುಮಾರಿಗೆ ಹೌಸಿಂಗ್ ಸೊಸೈಟಿ ಆವರಣದೊಳಗೆ ಆಟವಾಡುತ್ತಿದ್ದ. ಈ ಸಮಯದಲ್ಲಿ, ಆತ ಕಟ್ಟಡದ ಲಿಫ್ಟ್‌ಗೆ ಪ್ರವೇಶಿಸಿ ಒಂದು ಗುಂಡಿಯನ್ನು ಒತ್ತಿದ್ದಾನೆ ಎಂದು ವರದಿಯಾಗಿದೆ.

ಲಿಫ್ಟ್ ಚಲಿಸಲು ಪ್ರಾರಂಭಿಸಿತು. ಆದರೆ, ಎರಡನೇ ಮಹಡಿ ತಲುಪುವ ಮುನ್ನವೇ ಮಧ್ಯದಲ್ಲಿಯೇ ನಿಂತಿತು. ಇದರಿಂದಾಗಿ ಮಗು ಒಳಗೆ ಸಿಲುಕಿಕೊಂಡಿತು. ಶಿವಾಂಶ್ ಬಹಳ ಸಮಯವಾದರೂ ಮನೆಗೆ ಹಿಂತಿರುಗದಿದ್ದಾಗ, ಅವರ ಕುಟುಂಬ ಸದಸ್ಯರು ಮತ್ತು ಇತರ ನಿವಾಸಿಗಳು ಅವನನ್ನು ಹುಡುಕಲು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಡುಕಾಟ ಮುಂದುವರೆದಂತೆ, ಲಿಫ್ಟ್ ಸಿಕ್ಕಿಹಾಕಿಕೊಂಡಿರಬಹುದು ಎಂದು ನಿವಾಸಿಗಳು ಶಂಕಿಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries