HEALTH TIPS

ಮೇ 9ಕ್ಕೆ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

 ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಶನಿವಾರ ಮೇ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಮ್ಮುಖದಲ್ಲಿ ಕೋಲ್ಕತ್ತಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಹಲವು ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries