HEALTH TIPS

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ: 95.63ಕ್ಕೆ ತಲುಪಿದ ಮೌಲ್ಯ : ಆರ್ಥಿಕತೆಗೆ ಎದುರಾಯ್ತು ದೊಡ್ಡ ಕಂಟಕ!

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ರಾಜತಾಂತ್ರಿಕ ಅಸ್ಥಿರತೆ ಮತ್ತು ಕಚ್ಚಾ ತೈಲ ಬೆಲೆಗಳ ಏರಿಕೆಯಿಂದಾಗಿ ಭಾರತೀಯ ರೂಪಾಯಿ ಮೌಲ್ಯವು ಮಂಗಳವಾರ ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ.

ದಿನದ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ 95.63ಕ್ಕೆ ತಲುಪಿದ್ದು, ದೇಶದ ಆರ್ಥಿಕತೆಯಲ್ಲಿ ಆತಂಕ ಮೂಡಿಸಿದೆ.

ಸೋಮವಾರವಷ್ಟೇ 95.28ಕ್ಕೆ ಕುಸಿದಿದ್ದ ರೂಪಾಯಿ, ಮಂಗಳವಾರ ಮತ್ತೆ 35 ಪೈಸೆಗಳಷ್ಟು ಮೌಲ್ಯ ಕಳೆದುಕೊಂಡು 95.63ಕ್ಕೆ ಸ್ಥಿರವಾಯಿತು.ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ (CEA) ವಿ. ಅನಂತ ನಾಗೇಶ್ವರನ್ ಅವರು ಈ ಕುಸಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯದಂತೆ ತಡೆಯುವುದು ಈಗಿನ ಅತೀ ದೊಡ್ಡ ಆದ್ಯತೆಯಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.

ಬ್ರೆಂಟ್ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 107 ಡಾಲರ್ ದಾಟಿದ್ದು, ಆಮದು ವೆಚ್ಚ ಹೆಚ್ಚಳವಾಗಿರುವುದು ರೂಪಾಯಿ ಮೇಲೆ ಒತ್ತಡ ಹೇರಿದೆ.

ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮವು ಮುರಿದುಬೀಳುವ ಹಂತಕ್ಕೆ ತಲುಪಿರುವುದು ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸಿದೆ. ಜಾಗತಿಕ ಅನಿಶ್ಚಿತತೆಯಿಂದಾಗಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಭಾರತೀಯ ಷೇರು ಮಾರುಕಟ್ಟೆಯಿಂದ ದೊಡ್ಡ ಮಟ್ಟದಲ್ಲಿ ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ.ತೈಲ ಮತ್ತು ಇತರ ವಸ್ತುಗಳ ಆಮದು ವೆಚ್ಚ ದುಬಾರಿಯಾಗುತ್ತಿರುವುದು ಭಾರತದ ವ್ಯಾಪಾರ ಕೊರತೆಯನ್ನು ಹೆಚ್ಚಿಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries