ನವದೆಹಲಿ: ಪಂಚರಾಜ್ಯ ಚುನಾವಣೆಗಳಲ್ಲಿನ ಕಾಂಗ್ರೆಸ್ ಪಕ್ಷದ ಪ್ರದರ್ಶನ ಕುರಿತು ಸಂಸದ ಶಶಿತರೂರ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ಗೆ ಗಂಭೀರ ಆತ್ಮಪರಿಶೀಲನೆ ಅಗತ್ಯವಿದೆ ಎಂದು ಹೇಳಿದ್ದಾರೆ.
ಂಓI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 'ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮಿಶ್ರ ಫಲಿತಾಂಶಗಳ ಹಿನ್ನೆಲೆ ಕಾಂಗ್ರೆಸ್ ಪಕ್ಷವು “ಗಂಭೀರ ಆತ್ಮಪರಿಶೀಲನೆ” ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ತನ್ನ ತಂತ್ರಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಬೇಕು ಎಂದ ಅವರು, ಇದೇ ವೇಳೆ ಏeಡಿಚಿಟಚಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಿ, ಎಲ್‌ಡಿಎಫ್ ಆಡಳಿತದ 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಬಂದಿರುವುದನ್ನು ಅವರು ಸ್ವಾಗತಿಸಿದರು. ಆದರೆ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷದ ಸಾಧನೆ ನಿರಾಶಾಜನಕವಾಗಿದೆ ಎಂದು ಒಪ್ಪಿಕೊಂಡರು.
ಪಕ್ಷವು ಖಂಡಿತವಾಗಿಯೂ ಗಂಭೀರ ಆತ್ಮಪರಿಶೀಲನೆ ಮಾಡಬೇಕಾಗಿದೆ. ಕೇರಳದಲ್ಲಿ ನಾವು ಸರಿಯಾಗಿ ಮಾಡಿದದ್ದೇನು ಎಂಬುದಕ್ಕೆ ಉತ್ತಮ ಉದಾಹರಣೆ ಇದೆ. ಅದೇ ರೀತಿಯಲ್ಲಿ ಇತರಡೆ ಹೇಗೆ ಯಶಸ್ಸು ಸಾಧಿಸಬಹುದು ಎಂಬುದನ್ನು ಕಲಿಯಬೇಕು ಎಂದು ಅವರು ಹೇಳಿದರು.

