HEALTH TIPS

ಮನೆಯಲ್ಲಿ AC ಸ್ಪೋಟ ಶಂಕೆ: ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಮೃತ್ಯು

 ನವದೆಹಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (ಅಅI) ಮಾಜಿ ಮುಖ್ಯಸ್ಥ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ (80) ಅವರು ದಿಲ್ಲಿಯ ಹೌಜ್ ಖಾಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ʼಎಸಿʼ ಸ್ಫೋಟ ಮತ್ತು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 


ಘಟನೆಯಲ್ಲಿ ಅವರ ಪುತ್ರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ವೇಳೆ ಧನೇಂದ್ರ ಕುಮಾರ್ ಮತ್ತು ಅವರ ಕುಟುಂಬಸ್ಥರು ಹಾಗೂ ಮನೆಕೆಲಸಗಾರರು ಸೇರಿದಂತೆ ಒಟ್ಟು ಐವರು ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಧನೇಂದ್ರ ಕುಮಾರ್ ಮತ್ತು ಅವರ ಪುತ್ರನನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಧನೇಂದ್ರ ಕುಮಾರ್ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾರೆ. ಅವರ ಪುತ್ರ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮನೆಯಲ್ಲಿ ಅಳವಡಿಸಿದ್ದ ಎಸಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಕುಮಾರ್ ಅವರ ಮನೆಗೆ ಸಂಫೂರ್ಣವಾಗಿ ಹಾನಿಯಾಗಿದೆ ಎಂದು ತಿಳಿದು ಬಂದಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries