ಕಾಸರಗೋಡು: ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಮೂರರಲ್ಲಿ ಕ್ಷೇತ್ರಗಳಲ್ಲಿ ಯುಡಿಎಫ್ ಮುನ್ನಡೆ ಕಾಯ್ದುಕೊಂಡಿದೆ.
ಕಾಸರಗೋಡು, ಮಂಜೇಶ್ವರ ಮತ್ತು ತ್ರಿಕ್ಕರಿಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಯುಡಿಎಫ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಮಂಜೇಶ್ವರ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರು 2,452 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ 4,351 ಮತಗಳ ಮುನ್ನಡೆ ಸಾಧಿಸಿದ್ದಾರೆ.
ತ್ರಿಕ್ಕರಿಪುರದಲ್ಲಿ ಯುಡಿಎಫ್ ಅಭ್ಯರ್ಥಿ ಸಂದೀಪ್ ವಾರಿಯರ್ 1,821 ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

