HEALTH TIPS

ಕೆಸಿ ವೇಣುಗೋಪಾಲ್ ಕುರಿತು ಬಿಜೆಪಿಯಲ್ಲೇ 'ಭಿನ್ನಾಭಿಪ್ರಾಯ' ಇದೆ: ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ರಾಜೀವ್ ಚಂದ್ರಶೇಖರ್ ವ್ಯಂಗ್ಯ

ನವದೆಹಲಿ: ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುವಲ್ಲಿ ವಿಫಲವಾದ ಕಾಂಗ್ರೆಸ್ ಪಕ್ಷದ ವಿರುದ್ಧ ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ದಿಲ್ಲಿಯಲ್ಲೇ ಇರಬೇಕೆ ಅಥವಾ ಕೇರಳಕ್ಕೆ ಹೋಗಬೇಕೆ ಎಂಬ ಬಗ್ಗೆ ಬಿಜೆಪಿಯಲ್ಲಿಯೂ ಸಹ ಭಿನ್ನಾಭಿಪ್ರಾಯವಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.


ಎಕ್ಸ್ ನಲ್ಲಿ ವ್ಯಕ್ತಿಯೊಬ್ಬರ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಬಿಜೆಪಿಗೂ ಆದ್ಯತೆಯ ಅಭ್ಯರ್ಥಿ ಇದ್ದಾರೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

"ಕೇರಳ ಬಿಜೆಪಿ ಕೇರಳದಲ್ಲಿ ಕೆಸಿ ವೇಣುಗೋಪಾಲ್ ಅವರನ್ನು ಬಯಸುತ್ತದೆ, ರಾಷ್ಟ್ರೀಯ ಬಿಜೆಪಿ ದಿಲ್ಲಿಯಲ್ಲಿ ಕೆಸಿ ವೇಣುಗೋಪಾಲ್ ಅವರನ್ನು ಬಯಸುತ್ತದೆ" ಎಂದು ವ್ಯಕ್ತಿಯೊಬ್ಬರು ಪೋಸ್ಟ್ ‌ ಮಾಡಿದ್ದಾರೆ.

ಈ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, ಇದು ನಿಜ ಎಂದು ನಾನು ದೃಢೀಕರಿಸುವುದಿಲ್ಲ ಅಥವಾ ನಿರಾಕರಿಸುವುದು ಕೂಡ ಇಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಯುಡಿಎಫ್ 102 ಸ್ಥಾನಗಳನ್ನು ಗಳಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಒಮ್ಮತಕ್ಕೆ ಬರಲು ಕಾಂಗ್ರೆಸ್ ನಾಯಕತ್ವ ಹೆಣಗಾಡುತ್ತಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಮತ್ತು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಈ ಮೂವರ ಬೆಂಬಲಿಗರು ಪೋಸ್ಟರ್ ಪ್ರಚಾರದ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವದದಲ್ಲಿ ತೊಡಗಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries