ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕಾರಣದಿಂದಾಗಿ ವೆಚ್ಚವನ್ನು ತಗ್ಗಿಸಲು ಸೋಮವಾರ ಹಾಗೂ ಶುಕ್ರವಾರ ಆನ್‌ಲೈನ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುವಂತೆ ಎಲ್ಲಾ ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಮನವಿ ಮಾಡಿದರು.
ಆನ್‌ಲೈನ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮೇ 15ರಂದು ನಿರ್ಧರಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 'ಮಿತವ್ಯಯ'ಕ್ಕೆ ಕರೆ ನೀಡಿದ ಬೆನ್ನಲ್ಲೇ ಈ ನಿರ್ಧಾರ ಘೋಷಿಸಲಾಗಿತ್ತು.
ಸೋಮವಾರ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಹಿರಿಯ ವಕೀಲ ಮುಕುಲ್ ರೊಹ್ಟಗಿ ಅವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸಿಜೆಐ ಸೂರ್ಯಕಾಂತ್ ಅವರು, 'ಸಾಧ್ಯವಾದಲ್ಲಿ ಆನ್‌ಲೈನ್ ಮೂಲಕವೇ ವಿಚಾರಣೆ ನಡೆಸಿ ಎಂದು ಎಲ್ಲ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡುತ್ತೇನೆ' ಎಂದು ಹೇಳಿದರು.

