ನವದೆಹಲಿ: ಈ ಹಂತದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಎಕ್ಸ್ ಖಾತೆ ಮೇಲಿನ ನಿರ್ಬಂಧ ತೆರವುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಇದೇ ಸಮಯದಲ್ಲಿ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ಜುಲೈ 7ರೊಳಗೆ ಈ ವಿಷಯವನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಪರಿಶೀಲನಾ ಸಮಿತಿಗೆ ಸೂಚಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಪುರುಷೇಂದ್ರ ಕುಮಾರ್ ಕೌರವ್, ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಪರಿಶೀಲನಾ ಸಮಿತಿಯ ಮುಂದೆ ವರ್ಚುಲ್ ಆಗಿ ಹಾಜರಾಗಲು ಅನುಮತಿ ನೀಡಿದ್ದಾರೆ.
ಸಿಜೆಪಿ ಮೇಲಿನ ನಿರ್ಬಂಧ ತೆರವುಗೊಳಿಸಬೇಕು ಎಂದು ಪರಿಶೀಲನಾ ಸಮಿತಿಗೆ ಮನವರಿಕೆಯಾದರೆ ಕಾನೂನುಬದ್ಧವಾಗಿ ನಿರ್ಬಂಧ ತೆರವುಗೊಳಿಸುವ ಅಧಿಕಾರ ಇದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಕೇಂದ್ರ ಹಾಗೂ ಮೆಟಾ ಮಾಲೀಕತ್ವದ ಎಕ್ಸ್ ಪ್ರತಿಕ್ರಿಯೆ ಕೇಳಿ ನೋಟಿಸ್ ರವಾನಿಸಲಾಗಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಜುಲೈ 7ಕ್ಕೆ ನಿಗದಿಪಡಿಸಲಾಗಿದೆ.

