ಮುಂಬೈ: ತೈಲ ಬೆಲೆ ಹೆಚ್ಚಳ, ದುರ್ಬಲ ಜಾಗತಿಕ ಮಾರುಕಟ್ಟೆ ಪ್ರವೃತ್ತಿ ಮತ್ತು ಇರಾನ್ ಶಾಂತಿ ಒಪ್ಪಂದಕ್ಕೆ ಬರಲು ವಿಫಲವಾದರೆ ಮಿಲಿಟರಿ ಕಾರ್ಯಾಚರಣೆ ಪುನರಾರಂಭವಾಗುವ ಭೀತಿಯಿಂದಾಗಿ ಬುಧವಾರದ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಕುಸಿತ ದಾಖಲಿಸಿವೆ.
30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 517.11 ಅಂಶಗಳಷ್ಟು ಕುಸಿತ ಕಂಡು 74,667.51ರಲ್ಲಿ ವಹಿವಾಟು ಆರಂಭಿಸಿದರೆ, 50 ಷೇರುಗಳ ಎನ್‌ಎಸ್‌ಇ ನಿಫ್ಟಿ 152.45 ಅಂಶಗಳಷ್ಟು ಕುಸಿತ ಕಂಡು 23,475.80ರಲ್ಲಿ ವಹಿವಾಟು ಆರಂಭಿಸಿತು.
ಸೆನ್ಸೆಕ್ಸ್ ಸಂಸ್ಥೆಗಳ ಪೈಕಿ ಟಾಟಾ ಸ್ಟೀಲ್, ಭಾರತ್ ಎಲೆಕ್ಟ್ರಾನಿಕ್ಸ್, ಮಹೀಂದ್ರ ಅಂಡ್ ಮಹೀಂದ್ರ, ಮಾರುತಿ, ಎಟರ್ನಲ್ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಪ್ರಮುಖವಾಗಿ ನಷ್ಟ ಅನುಭವಿಸಿವೆ.
ಇನ್ಫೊಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಟೆಕ್ ಮಹೀಂದ್ರ ಷೇರುಗಳು ಏರಿಕೆ ಕಂಡಿವೆ.
ಜಾಗತಿಕ ತೈಲ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲವು ಬ್ಯಾರಲ್‌ಗೆ 110.8 ಡಾಲರ್‌ನಂತೆ ವಹಿವಾಟು ನಡೆಸುತ್ತಿದೆ.
ಏಷ್ಯಾ ಮಾರುಕಟ್ಟೆಗಳ ಪೈಕಿ ದಕ್ಷಿಣ ಕೊರಿಯಾದ ಕಾಸ್ಪಿ, ಜಪಾನ್‌ನ ನಿಕ್ಕಿ 225 ಸೂಚ್ಯಂಕ, ಶಾಂಘೈನ ಎಸ್‌ಎಸ್‌ಇ ಕಾಂಪೋಸಿಟ್ ಸೂಚ್ಯಂಕ ಮತ್ತು ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಸೂಚ್ಯಂಕಗಳು ಕುಸಿತ ಕಂಡಿವೆ.
ವಿನಿಮಯ ದತ್ತಾಂಶದ ಪ್ರಕಾರ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರ ₹2,457.49 ಕೋಟಿ ಮೊತ್ತದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

