HEALTH TIPS

ಕನ್ನಡದಲ್ಲಿ ಪ್ರಮಾಣವಚನ-ಶಾಸಕ ಎ.ಕೆ.ಎಂ ಅಶ್ರಫ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಡಾ. ಸಿ. ಸೋಮಶೇಖರ್ ಮನವಿ

ಕಾಸರಗೋಡು: ಮಂಜೇಶ್ವರ ವಿಧಾನಸಭಾ  ಕ್ಷೇತ್ರದ ಸದಸ್ಯರಾಗಿ ಆಯ್ಕೆಗೊಂಡಿರುವ ಎ.ಕೆ.ಎಂ  ಅಶ್ರಫ್ ಅವರು ಕೇರಳ ವಿಧಾನ ಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತಮ್ಮ ಕನ್ನಡಾಭಿಮಾನ ಮೆರೆದಿದ್ದು, ಇದು ಕೇರಳ ಹಾಗೂ ಕರ್ನಾಟಕ ಗಡಿ ಭಾಗದ  ಕನ್ನಡಿಗರಿಗೆ  ಅಭಿಮಾನದ  ವಿಷಯ ವಾಗಿದೆ. ಇವರಿಗೆ ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು  ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ. ಐಎಎಸ್ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.  


ಈ ಹಿಂದೆ 2021 ರಲ್ಲಿ ಎ.ಕೆ.ಎಂ ಅಶ್ರಫ್ ಶಾಸಕರಾಗಿ ಆಯ್ಕೆಯಾದಾಗಲೂ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು ಅವರಿಗೆ ಕನ್ನಡದ ಬಗ್ಗೆ ಹಾಗೂ ಗಡಿನಾಡಿನ ಕನ್ನಡಿಗರ ಬಗ್ಗೆ ಇರುವ ಪ್ರೀತಿ ಮತ್ತು ಬದ್ಧತೆ ಯನ್ನು ಸಂಕೇತಿಸುತ್ತದೆ.  ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿದ್ದ ತನ್ನ ಕಾಲಾವಧಿಯಲ್ಲಿ ಕಾಸರಗೋಡಿದ  ಕನ್ನಡಿಗರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದ ಎ.ಕೆ.ಎಂ ಅಶ್ರಫ್ ಅವರು ಕನ್ನಡಕ್ಕೆ ಸಂಬಂಧಿಸಿದ ಎಲ್ಲಾ  ಸಮಾರಂಭಗಳಲ್ಲಿ ಅವರು ನಿರರ್ಗಳವಾಗಿ ಕನ್ನಡದಲ್ಲಿಯೇ ಮಾತನಾಡುವ ಮೂಲಕ ತಮ್ಮ ಕನ್ನಡದ ಪ್ರೀತಿ ಮೆರಯುತ್ತಿದ್ದಾರೆ.   ಕನ್ನಡಪರ ನಿಲುವು ಹೊಂದಿದ,   ಗಡಿ ನಾಡ ಕನ್ನಡಿಗರ ಬಗ್ಗೆ ಅಪಾರ ಕಾಳಜಿಯುಳ್ಳ  ಅಶ್ರಫ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡುವುದಾಗಿಯೂ ಡ. ಸಿ. ಸಓಮಶೇಖರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries