ಕಾಸರಗೋಡು: ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕøತಿಕ ಸಂಸ್ಥೆಯ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಸರಗೋಡಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ, ಜಾನಪದ ವಿದ್ವಾಂಸ, ಗೊಂಬೆಯಾಟ ಕಲಾವಿದ ಹಾಗೂ ಕೇರಳ ತುಳು ಅಕಾಡೆಮಿಯ ಮಾಜಿ ಸದಸ್ಯ ಪೆÇ್ರ. ಎ. ಶ್ರೀನಾಥ ಅವರನ್ನು ಆರ್ಯಭಟ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಣ, ಸಾಹಿತ್ಯ ಮತ್ತು ಕಲಾಕ್ಷೇತ್ರದ ಸಾಧನೆಗಾಗಿ 2026ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಉದ್ಘಾಟಿಸಿದರು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಅಧ್ಯಕ್ಷತೆ ವಹಿಸಿದ್ದರು. ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಡಾ. ಕೆ.ಎನ್ ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಸುಮಾ, ವಿ.ನಾಗೇಂದ್ರ, ಮಂಗಳೂರಿನ ಪ್ರತಿನಿಧಿ ಪೆÇ್ರ. ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.
ತುಳು ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರದ ಸೇವೆಗಾಗಿ ಮಂಗಳೂರಿನ ಡಾ.ಸಂಜೀವ ದಂಡಕೇರಿ, ಮಹಿಳಾ ಯಕ್ಷಗಾನದಲ್ಲಿ ಕುಂದಾಪುರದ ಪ್ರೇಮಾ ಕಿಶೋರ್, ಭರತನಾಟ್ಯದಲ್ಲಿ ಪುತ್ತೂರಿನ ರೋಹಿಣಿ ಉದಯ್ ಸೇರಿದಂತೆ ರಾಜ್ಯ,ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 72ಮಂದಿ ಹಿರಿಯ ಸಾಧಕರಿಗೆ 2025 - 26 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ವಿತರಿಸಲಾಯಿತು.



