HEALTH TIPS

ಕಾಸರಗೋಡಿನ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಕಾಸರಗೋಡು: 2026 ರ ವಿಧಾನಸಭಾ ಚುನಾವಣೆಯ ಮತ ಎಣಿಕಾ ಪ್ರಕ್ರಯೆ ಅಂಗವಾಗಿ, ಜಿಲ್ಲಾ ಚುನಾವಣಾ ಅಧಿಕಾರಿ, ಹಾಗೂ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಕಾಸರಗೋಡು ಸರ್ಕಾರಿ ಕಾಲೇಜಿನ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಮಂಜೇಶ್ವರ, ಕಾಸರಗೋಡು ಮತ್ತು ಉದುಮ ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ಸಿದ್ಧತೆಗಳನ್ನು ಪರಿಶೀಲಿಸಿದರು. ಮೇ 4ರಂದು ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭಗೊಳ್ಳಲಿದೆ. 


ಈ ಸಂದರ್ಭ ಮತ ಎಣಿಕಾ ಕಾರ್ಯಗಳ ಬಗ್ಗೆ ಚುನಾವಣಾಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು. ಕಾಸರಗೋಡು ಸರ್ಕಾರಿ ಕಾಲೇಜಿನ ಮೂರು ಕೇಂದ್ರಗಳಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, ಅಂಚೆ ಮತಗಳ ಎಣಿಕೆಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ.  ಕೊಠಡಿಗಳಿಂದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತರಲು ಹಾಗೂ ಮತ ಎಣಿಕೆಗೆ ನಿಯೋಜಿಸಲಾದ ಅಧಿಕಾರಿಗಳು ಮತ್ತು ಎಣಿಕಾ ಏಜೆಂಟ್‍ಗಳಿಗೆ ತೆರಳಲು ಪ್ರತ್ಯೇಕ ಮಾರ್ಗಗಳನ್ನು ಸಿದ್ಧಪಡಿಸಲಾಗಿದೆ. ಎಣಿಕೆ ಕೇಂದ್ರಗಳಿಗೆ ಪ್ರವೇಶಿಸುವವರಿಗೆ ಮೂರು ಹಂತದ ಭದ್ರತಾ ತಪಾಸಣೆ ಇರಲಿದೆ. ಎಣಿಕೆಗೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ. ಎಣಿಕೆ ಕೇಂದ್ರಗಳ ಭಾಗವಾಗಿ ಸಂವಹನ ಕೇಂದ್ರ ಮತ್ತು ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.  

ರಿಟನಿರ್ಂಗ್ ಅಧಿಕಾರಿಗಳಾದ ಉಪಾಧ್ಯಕ್ಷ ರಘು ಮಣಿ ಬಿನು ಜೋಸೆಫ್,  ಲಿಪು ಎಸ್ ಲಾರೆನ್ಸ್,  ಚುನಾವಣಾ ಸಹಾಯಕ ಜಿಲ್ಲಾಧಿಕಾರಿ ಎನ್ ಗೋಪಕುಮಾರ್ ಸಹಾಯಕ ಚುನಾವಣಾ ಅಧಿಕಾರಿಗಳು ಜತೆಗಿದ್ದರು.

ತ್ರಿಕರಿಪುರ ಮತ್ತು ಕಾಞಂಗಾಡ್ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾಞಂಗಾಡ್‍ನ ದುರ್ಗಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries