ಕಾಸರಗೋಡು: ಕೇರಳದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮೇ 27 ಮತ್ತು 28 ರಂದು ರಾಜ್ಯ ಸರ್ಕಾರ ಸಾರ್ವಜನಿಕ ರಜೆಯಾಗಿ ಘೋಷಿಸಿದೆ. ರಾಜ್ಯ ಸರ್ಕಾರದ ಕ್ಯಾಲೆಂಡರ್‍ನಲ್ಲಿ ಮೇ 27ರಂದು ಸಾರ್ವಜನಿಕ ರಜೆಯಾಗಿ ಘೋಷಿಸಲಾಗಿತ್ತು. ಸರ್ಕಾರದ ತೀರ್ಮಾನದನ್ವಯ ಮೇ 28ರಂದೂ ಸರ್ಕಾರ ರಜೆ ಘೋಷಿಸಿದೆ. ಈ ಎರಡು ದಿನಗಳಲ್ಲಿ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಿಕೊಳ್ಳಲಿದೆ.

