HEALTH TIPS

ಇರಾನ್ ಮೇಲೆ ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಸಂಘರ್ಷ ಶಮನಕ್ಕೆ ಸಂಧಾನ ಮಾತುಕತೆ ನಡೆಯುತ್ತಿರುವ ನಡುವೆಯೇ ಅಮೆರಿಕ ಇರಾನ್‌ನ ಕೆಲವು ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಅಮೆರಿಕ ಸೇನೆ ಹಾಗೂ ಹಾರ್ಮುಝ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಅಪಾಯವಾಗಬಹುದು ಎಂದು ಶಂಕಿಸಿದ್ದ ಇರಾನ್‌ನ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಅಪಾಯಕಾರಿಯೆಂದು ಪರಿಗಣಿಸಿದ್ದ ಕೆಲವು ಇರಾನ್ ಡ್ರೋಣ್‌ಗಳನ್ನು ಕೂಡ ಅಮೆರಿಕ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಸಾವಿರಾರು ಮಂದಿಯ ಸಾವಿಗೆ ಹಾಗೂ ಜಾಗತಿಕ ಶಿಪ್ಪಿಂಗ್ ಕ್ಷೇತ್ರದಲ್ಲಿ ಅಸ್ತವ್ಯಸ್ತತೆಗೆ ಕಾರಣವಾಗಿರುವ ಸಂಘರ್ಷವನ್ನು ಕೊನೆಗೊಳಿಸಲು ಶಾಂತಿ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಈ ದಾಳಿ ನಡೆದಿದೆ. ಇದೇ ವೇಳೆ, ಲೆಬನಾನ್‌ನಲ್ಲಿ ಇಸ್ರೇಲ್ ತನ್ನ ಸೇನಾ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಯುರೇನಿಯಂ ಪುಷ್ಟೀಕರಣ, ನಿರ್ಬಂಧ ತೆರವು ಹಾಗೂ ಪ್ರಾದೇಶಿಕ ಭದ್ರತೆ ವಿಷಯಗಳಲ್ಲಿ ಇರಾನ್ ತನ್ನ ನಿಲುವನ್ನು ಮತ್ತಷ್ಟು ಕಠಿಣಗೊಳಿಸಿದೆ.

ಇರಾನ್‌ನ ದಕ್ಷಿಣ ಭಾಗದ ಬಂದರು ನಗರ ಬಂದರ್ ಅಬ್ಬಾಸ್ ಸಮೀಪ ಮೂರು ಸ್ಫೋಟಗಳ ಸದ್ದು ಕೇಳಿಬಂದಿದೆ ಎಂದು ಫಾರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಸ್ಫೋಟದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries