HEALTH TIPS

ನೈರುತ್ಯ ಮುಂಗಾರು: ವಾಡಿಕೆಗಿಂತ ಕಡಿಮೆ ಮಳೆ

ನವದೆಹಲಿ: 'ಈಶಾನ್ಯ ಭಾಗವನ್ನು ಹೊರತುಪಡಿಸಿ, ದೇಶದ ಇತರೆಡೆ ಈ ಬಾರಿ ನೈರುತ್ಯ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ' ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ.

50 ವರ್ಷಗಳ ದೀರ್ಘಾವಧಿ ಸರಾಸರಿ (1971ರಿಂದ 2020ರವರೆಗಿನ ದತ್ತಾಂಶ) ಲೆಕ್ಕಾಚಾರದಲ್ಲಿ ದೇಶದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆ 87 ಸೆಂ.ಮೀನಷ್ಟು ಮಳೆಯಾಗುತ್ತದೆ.

ಈ ಬಾರಿ ಈ ಪ್ರಮಾಣದ ಶೇ 90ರಷ್ಟು ಮಾತ್ರವೇ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ. ಶೇ 94ರಷ್ಟು ಮಳೆಯಾದರೆ, ಅದು ವಾಡಿಕೆಯಷ್ಟು ಮಳೆ ಎಂದು ಪರಿಗಣಿಸಲಾಗುತ್ತದೆ.

'ವಾಡಿಕೆಗಿಂತ ಶೇ 4ರಷ್ಟು ಮಳೆ ಪ್ರಮಾಣದಲ್ಲಿ ಏರುಪೇರಾಗಬಹುದು. ಒಂದು ವೇಳೆ ವಾಡಿಕೆ ಮಳೆ ಪ್ರಮಾಣದ ಶೇ 90ರಷ್ಟು ಮಳೆಯಾದರೆ ದೇಶದಲ್ಲಿ ಮಳೆ ಕೊರತೆ ಉಂಟಾಗಲಿದೆ. ಜೊತೆಗೆ, ಮಳೆಯಾಧಾರಿತ ಕೃಷಿ ಚಟುವಟಿಕೆ ನಡೆಯುವ ಪ್ರದೇಶಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ' ಎಂದು ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮಹೋಪಾತ್ರಾ ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries