HEALTH TIPS

ಅಮೆರಿಕ ತಿರಸ್ಕರಿಸಿದ ಶಾಂತಿ ಪ್ರಸ್ತಾವನೆಯನ್ನು ಸಮರ್ಥಿಸಿಕೊಂಡ ಇರಾನ್

 ಟೆಹ್ರಾನ್: ಅಮೆರಿಕದೊಂದಿಗಿನ ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಇರಾನ್ ನೀಡಿರುವ ಪ್ರಸ್ತಾವನೆಯು 'ನ್ಯಾಯಬದ್ಧ' ಮತ್ತು 'ಉದಾರ'ವಾದುದು ಎಂದು ಇರಾನ್ ಸೋಮವಾರ ಪ್ರತಿಪಾದಿಸಿದೆ.


ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯ್ ಅವರು ತಮ್ಮ ಬೇಡಿಕೆಗಳನ್ನು ಮಾಧ್ಯಮಗಳ ಮುಂದೆ ವಿವರಿಸಿದ್ದಾರೆ.

'ಅಮೆರಿಕ- ಇರಾನ್‌ ನಡುವೆ ನಡೆಯುತ್ತಿರುವ ಯುದ್ಧವನ್ನು ತಕ್ಷಣವೇ ನಿಲ್ಲಿಸುವುದು. ಅಮೆರಿಕ ಹೇರಿರುವ ಆರ್ಥಿಕ ದಿಗ್ಬಂಧನಗಳನ್ನು ಹಿಂಪಡೆಯುವುದು. ಅಕ್ರಮವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಇರಾನ್‌ನ ಆಸ್ತಿಗಳನ್ನು ಬಿಡುಗಡೆ ಮಾಡುವುದು. ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದು. ಲೆಬನಾನ್ ಸೇರಿದಂತೆ ಇಡೀ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವುದು ಶಾಂತಿ ಪ್ರಸ್ತಾವನೆಯ ಅಂಶಗಳು' ಎಂದು ಬಘಾಯ್ ವಿವರಿಸಿದ್ದಾರೆ.

ಅಮೆರಿಕ ತಿರಸ್ಕಾರ

ಇರಾನ್‌ನ ಈ ಪ್ರಸ್ತಾವನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿಹಾಕಿದ್ದಾರೆ. ಇರಾನ್‌ನ ಪ್ರತಿಕ್ರಿಯೆಯನ್ನು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದಿರುವ ಅವರು, ಈ ಕುರಿತು ಸಾಮಾಜಿಕ ಮಾಧ್ಯಮ 'ಟ್ರೂತ್ ಸೋಷಿಯಲ್'ನಲ್ಲಿ ಬರೆದುಕೊಂಡಿದ್ದಾರೆ.

ಮುಂದುವರಿದ ಉದ್ವಿಗ್ನತೆ

ಒಂದೆಡೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಕೊಲ್ಲಿ ರಾಷ್ಟ್ರಗಳಲ್ಲಿ ಆತಂಕ ಮುಂದುವರಿದಿದೆ.

ಇರಾನ್‌ನಿಂದ ಉಡಾಯಿಸಲಾದ ಎರಡು ಡ್ರೋನ್‌ಗಳನ್ನು ತಡೆಹಿಡಿದಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಹೇಳಿಕೊಂಡಿದೆ. ಕುವೈತ್ ಕೂಡ ತನ್ನ ವಾಯುಪ್ರದೇಶದಲ್ಲಿ ಶತ್ರು ಡ್ರೋನ್‌ಗಳನ್ನು ಪತ್ತೆಹಚ್ಚಿರುವುದಾಗಿ ತಿಳಿಸಿದೆ. ಆದರೆ, ಈ ದಾಳಿಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries