ನವದೆಹಲಿ (PTI): ವ್ಯಾಪಾರ ಒಪ್ಪಂದ ಕುರಿತಾಗಿ ಮುಂದಿನ ಸುತ್ತಿನ ಮಾತುಕತೆ ನಡೆಸಲು ಅಮೆರಿಕದ ತಂಡವು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಆದರೆ, ಭೇಟಿಯ ದಿನಾಂಕ ಅಂತಿಮಗೊಂಡಿಲ್ಲ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಮಧ್ಯಂತರ ವ್ಯಾಪಾರ ಒಪ್ಪಂದದ ವಿವರಗಳನ್ನು ಅಂತಿಮಗೊಳಿಸಲು ಮತ್ತು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಮುಂದುವರಿಸಲು ಭಾರತದ ತಂಡವು ಏಪ್ರಿಲ್‌ನಲ್ಲಿ ವಾಷಿಂಗ್ಟನ್‌ಗೆ ಭೇಟಿ ನೀಡಿ, ಅಮೆರಿಕದ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಿತ್ತು.
ಏಪ್ರಿಲ್‌ನಲ್ಲಿ ನಡೆದ ಸಭೆಯ ಬಳಿಕ, ಎರಡೂ ಕಡೆಯವರು ಮಾತುಕತೆ ಮುಂದುವರಿಸಲು ಒಪ್ಪಿದ್ದರು. ಫೆಬ್ರುವರಿ 7ರಂದು ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ಅಂತಿಮಗೊಳಿಸಿವೆ.

