HEALTH TIPS

ರಾಜಕೀಯ ವಿವಾದಕ್ಕೆ ತಿರುಗಿದ ಸುವೇಂದು ಸಹಾಯಕನ ಹತ್ಯೆ: ಬಿಜೆಪಿ-ಟಿಎಂಸಿ ವಾಗ್ಯುದ್ಧ

 ಕೋಲ್ಕತ್ತ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆಯು ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. 'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ' ಎಂದು ಬಿಜೆಪಿ ಆರೋಪಿಸಿದರೆ, ತೃಣಮೂಲ ಕಾಂಗ್ರೆಸ್ ಈ ಆರೋಪವನ್ನು ತಳ್ಳಿಹಾಕಿದೆ. 


'ವಿರೋಧ ಪಕ್ಷದ ನಾಯಕರಿಗೆ ಅತ್ಯಂತ ಹತ್ತಿರವಿದ್ದ ವ್ಯಕ್ತಿಯನ್ನು ಯೋಜಿತ ರೀತಿಯಲ್ಲಿ ಗುರಿಯಾಗಿಸಿ ಕೊಲ್ಲಲಾಗಿದೆ. ಬಂಗಾಳದ ಜನತೆ ಅಧಿಕಾರದಿಂದ ಕಿತ್ತೆಸೆದಿರುವ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಇದೇ ಸಾಕ್ಷಿ' ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಬಿಜೆಪಿಯ ಆರೋಪಗಳನ್ನು ತಳ್ಳಿಹಾಕಿರುವ ಟಿಎಂಸಿ, 'ತನಿಖೆ ಮುಗಿಯುವ ಮೊದಲೇ ಬಿಜೆಪಿ ಈ ಘಟನೆಯನ್ನು ರಾಜಕೀಯಗೊಳಿಸುತ್ತಿದೆ. ಈ ದುರದೃಷ್ಟಕರ ಘಟನೆಗೂ ತೃಣಮೂಲ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ. ಪೊಲೀಸರು ವೃತ್ತಿಪರವಾಗಿ ತನಿಖೆ ನಡೆಸುತ್ತಿದ್ದಾರೆ. ಬಿಜೆಪಿ ಹೀಗೆ ಆಧಾರರಹಿತ ಆರೋಪ ಮಾಡುವುದನ್ನು ನಿಲ್ಲಿಸಲಿ. ನಾವೇ ಈ ಹತ್ಯೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದೇವೆ' ಎಂದು ಟಿಎಂಸಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಪ್ರತಿ ದುರಂತವನ್ನೂ ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಟಿಎಂಸಿ ನಿಲುವನ್ನು ಕಾಂಗ್ರೆಸ್ ಟೀಕಿಸಿದೆ. 'ರಾಜಕೀಯ ಲಾಭಕ್ಕಿಂತ ಹಂತಕರನ್ನು ಬಂಧಿಸಿ ನ್ಯಾಯ ಒದಗಿಸುವುದರ ಕಡೆಗೆ ಗಮನ ಹರಿಸಬೇಕು' ಎಂದು ಕಾಂಗ್ರೆಸ್ ಹೇಳಿದೆ.

ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲೇ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್‌ಗ್ರಾಮ್‌ದಲ್ಲಿ ನಡೆದ ಈ ಹತ್ಯೆ ರಾಜ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಬುಧವಾರ ರಾತ್ರಿ ಸುಮಾರು 10.30ಕ್ಕೆ ಮಧ್ಯಮ್‌ಗ್ರಾಮ್‌ ಪ್ರದೇಶದ ಜೆಸ್ಸೋರ್‌ ರಸ್ತೆಯ ದೊಹರಿಯಾ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಂದ್ರನಾಥ್ ರಥ್ ಅವರ ವಾಹನವನ್ನು ಅಡ್ಡಗಟ್ಟಿ, ಅತೀ ಸಮೀಪದಿಂದ ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದಾಳಿಯಲ್ಲಿ ಗಂಭೀರ ಗಾಯಗೊಂಡ ಚಂದ್ರನಾಥ್‌ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries