ನವದೆಹಲಿ: ಸಚಿವ ಕುನ್ವಾರ್ ವಿಜಯ್ ಶಾ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂಬಂಧ ನಿರ್ಧಾರ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಮಧ್ಯಪ್ರದೇಶ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅತೃಪ್ತಿ ವ್ಯಕ್ತಪಡಿಸಿದೆ.
'ಆಪರೇಷನ್ ಸಿಂಧೂರ'ದ ಬಗ್ಗೆ 2025ರಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಮಹಿಳಾ ಅಧಿಕಾರಿ ಕಲೋನಿಯಲ್ ಸೋಫಿಯಾ ಖುರೇಷಿ ಅವರ ಕುರಿತು ಕುನ್ವಾರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಸರ್ಕಾರದ ನಿರ್ಧಾರ ವಿಳಂಬವಾದ ಹಿನ್ನೆಲೆಯಲ್ಲಿ ಭಾರತದ ಮುಖ್ಯನ್ಯಾಯ ಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿಅವರ ಪೀಠವು ಬೇಸರ ವ್ಯಕ್ತಪಡಿಸಿದೆ.

