HEALTH TIPS

ಅಮೆರಿಕ-ಇರಾನ್: ಮತ್ತೊಂದು ಸುತ್ತಿನ ಮಾತುಕತೆಗೆ ಆತಿಥ್ಯ ವಹಿಸಲು ಪಾಕಿಸ್ತಾನ ಸಜ್ಜು

 ಇಸ್ಲಾಮಾಬಾದ್: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆ ಶಮನಗೊಳಿಸುವ ನಿಟ್ಟಿನಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ಮತ್ತೊಂದು ಸುತ್ತಿನ ಶಾಂತಿ ಮಾತುಕತೆಗೆ ಆತಿಥ್ಯ ವಹಿಸಲು ಪಾಕಿಸ್ತಾನ ಉತ್ಸುಕವಾಗಿದೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಭಾನುವಾರ ತಿಳಿಸಿದ್ದಾರೆ. 


ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಡೆಸುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿರುವ ಷರೀಫ್, ಯುದ್ಧಪೀಡಿತ ಪ್ರದೇಶದಲ್ಲಿ ಶಾಂತಿ ನೆಲೆಸಲು ಪಾಕಿಸ್ತಾನ ತನ್ನ ಪ್ರಯತ್ನಗಳನ್ನು ಮುಂದುವರಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಶನಿವಾರದಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೌದಿ ಅರೇಬಿಯಾ, ಕತಾರ್, ಟರ್ಕಿ, ಈಜಿಪ್ಟ್, ಯುಎಇ, ಜೋರ್ಡಾನ್, ಬಹ್ರೇನ್ ಮತ್ತು ಪಾಕಿಸ್ತಾನ ಸೇರಿದಂತೆ ಪ್ರಮುಖ ಮುಸ್ಲಿಂ ರಾಷ್ಟ್ರಗಳ ನಾಯಕರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಚರ್ಚೆ ನಡೆಸಿದ್ದರು. ಈ ವೇಳೆ ಪಾಕಿಸ್ತಾನದ ಪರವಾಗಿ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಈ ಸಂವಾದದಲ್ಲಿ ಭಾಗವಹಿಸಿದ್ದರು.

ಪ್ರಸ್ತುತ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ಷರೀಫ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಪಾಕಿಸ್ತಾನವು ಅತ್ಯಂತ ಪ್ರಾಮಾಣಿಕತೆಯಿಂದ ಈ ಪ್ರಯತ್ನಗಳನ್ನು ಮುಂದುವರಿಸಲಿದ್ದು, ಶೀಘ್ರದಲ್ಲೇ ಮುಂದಿನ ಸುತ್ತಿನ ಮಾತುಕತೆಗೆ ಆತಿಥ್ಯ ವಹಿಸುವ ನಿರೀಕ್ಷೆಯಿದೆ ಎಂದು ಬರೆದುಕೊಂಡಿದ್ದಾರೆ. ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸೇನಾ ಮುಖ್ಯಸ್ಥ ಮುನೀರ್ ಅವರನ್ನು ಕೊಂಡಾಡಿದ್ದಾರೆ.

ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ಶನಿವಾರ ತಡರಾತ್ರಿಯವರೆಗೆ ಟೆಹರಾನ್‌ನಲ್ಲಿ ಇರಾನ್‌ನ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿ, ಅಮೆರಿಕ-ಇರಾನ್ ನಡುವೆ ನಿರ್ಣಾಯಕ ಒಪ್ಪಂದಕ್ಕೆ ಬರಲು ಕಸರತ್ತು ನಡೆಸಿದ್ದರು. ಇದರ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ತಮ್ಮ 'ಟ್ರುತ್ ಸೋಷಿಯಲ್'ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಅಮೆರಿಕ, ಇರಾನ್ ಮತ್ತು ಇತರ ಸಂಬಂಧಿತ ದೇಶಗಳ ನಡುವಿನ ಒಪ್ಪಂದದ ಬಹುತೇಕ ಮಾತುಕತೆಗಳು ಮುಗಿದಿದ್ದು, ಅಂತಿಮ ಹಂತದ ಸಹಿ ಬಾಕಿ ಇದೆ ಎಂದು ಬರೆದುಕೊಂಡಿದ್ದರು.

ಇದೇ ವೇಳೆ ತಮಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೂ ಸಕಾರಾತ್ಮಕ ಮಾತುಕತೆ ನಡೆದಿದೆ ಎಂದು ತಿಳಿಸಿರುವ ಟ್ರಂಪ್, ಒಪ್ಪಂದದ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದಿದ್ದಾರೆ.

ಫೆಬ್ರುವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿದಾಳಿಯಿಂದಾಗಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ತಲೆದೋರಿತ್ತು. ಜಗತ್ತಿನ ಐದನೇ ಒಂದು ಭಾಗದಷ್ಟು ಇಂಧನ ಸರಬರಾಜಾಗುವ ಹೊರ್ಮುಜ್ ಜಲಮಾರ್ಗದಲ್ಲಿ ಹಡಗು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಏಪ್ರಿಲ್ 8ರಿಂದ ಕದನ ವಿರಾಮ ಜಾರಿಯಲ್ಲಿದ್ದರೂ ಸಹಜ ಸ್ಥಿತಿಗೆ ಮರಳಲಿಲ್ಲ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries