ಕೋಲ್ಕತ್ತ: ಪಶ್ಚಿಮ ಬಂಗಾಳದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯಗೊಳಿಸಲಾಗಿದೆ.
ತರಗತಿ ಆರಂಭಕ್ಕೂ ಮುನ್ನ ಬೆಳಗಿನ ಪ್ರಾರ್ಥನೆ ವೇಳೆ ಪ್ರತಿಯೊಬ್ಬ ವಿದ್ಯಾರ್ಥಿಯೂ ರಾಷ್ಟ್ರಗಾನ ಹಾಡುವುದರಲ್ಲಿ ಪಾಲ್ಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.
'ಮುಂದಿನ ಸೋಮವಾರದಿಂದ ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಅನ್ನು ಪ್ರಾರ್ಥನಾ ಗೀತೆಯಾಗಿ ಪರಿಚಯಿಸಲಾಗುವುದು. ನಾನು ಇಂದು ನಬನ್ನಾಕ್ಕೆ ತೆರಳಿ ಈ ಬಗ್ಗೆ ಮಾಹಿತಿ ನೀಡುತ್ತೇನೆ' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಹಿಂದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ರವೀಂದ್ರನಾಥ ಟ್ಯಾಗೋರ್ ಅವರು ರಚಿಸಿದ 'ಜನ ಗಣ ಮನ'ವನ್ನು ಮಾತ್ರ ಹಾಡಲಾಗುತ್ತಿತ್ತು.

