HEALTH TIPS

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯವಾದಿ ಸರ್ಕಾರ; ಮುಖ್ಯಮಂತ್ರಿ ಸುವೇಂದು ಅಧಿಕಾರಿ

ಸಿಲಿಗುರಿ: ಪಶ್ಚಿಮ ಬಂಗಾಳದಲ್ಲಿ ರಚನೆಯಾಗಿರುವ ಬಿಜೆಪಿ ಸರ್ಕಾರ ರಾಷ್ಟ್ರೀಯವಾದಿಗಳಾದ್ದಾಗಿರಲಿದೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದ್ದಾರೆ.

ಉತ್ತರ ಬಂಗಾಳ ಪ್ರವಾಸದಲ್ಲಿರುವ ಅವರು ಬುಧವಾರ ಇಲ್ಲಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ ಮಾತನಾಡಿದರು. ನಮ್ಮದು ರಾಷ್ಟ್ರೀಯವಾದಿಗಳ ಸರ್ಕಾರವಾಗಿದ್ದು ದೇಶದ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲಿದೆ ಎಂದು ಅವರು ಹೇಳಿದರು.

ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ನಿಗದಿತ ಅವಧಿಯೊಳಗೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಸಂಕಲ್ಪಪತ್ರದಲ್ಲಿ ಘೋಷಿಸಿದ ಹಲವು ಯೋಜನೆಗಳ ಲಾಭಗಳನ್ನು ಜನರು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ. ಜನರ ಇಚ್ಚೆಗೆ ತಕ್ಕಂತೆ ಕೆಲಸ ಮಾಡಲು ಬದ್ಧವಾಗಿದೆ' ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಈಗಾಗಲೇ ಅನ್ನಪೂರ್ಣ ಯೋಜನೆ, ಮಹಿಳೆಯರಿಗೆ ಮಾಸಿಕ ₹3 ಸಾವಿರ ನೆರವು, ಮಹಿಳೆಯರಿಗೆ ಉಚಿತ ಬಸ್‌ ಸೇವೆ, ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ' ಎಂದು ಅವರು ಪುನರುಚ್ಛರಿಸಿದ್ದಾರೆ.

ರಾಜ್ಯದ ಬದಲಾದ ಪರಿಸ್ಥಿತಿಯಲ್ಲಿ ಮಾಫಿಯಾ ಆಡಳಿತ ಅಂತ್ಯಕಂಡಿದ್ದು, ದೇಶ ವಿರೋಧಿ ಚಟುವಟಿಕೆಗಳಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries