HEALTH TIPS

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಲಾತೂರ್‌ನಲ್ಲಿ ಕೋಚಿಂಗ್ ಸೆಂಟರ್ ಸ್ಥಾಪಕನ ಬಂಧನ

ನವದೆಹಲಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ರೇಣುಕೈ ಕೆಮಿಸ್ಟ್ರಿ ಕ್ಲಾಸಸ್ (ಆರ್‌ಸಿಸಿ) ಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ(ಮೇ 18) ತಿಳಿಸಿದ್ದಾರೆ.

ಸಿಬಿಐ ತನಿಖೆಯ ವೇಳೆ ಮೋಟೆಂಗಾಂವ್ಕರ್ ಅವರ ಮೊಬೈಲ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಸೋರಿಕೆಯಾದ ಪ್ರಶ್ನೆ ಪತ್ರಿಕೆ ಪತ್ತೆಯಾಗಿದೆ. ಅದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಅದನ್ನು ವ್ಯವಸ್ಥಿತವಾಗಿ ಹಂಚಲಾಗಿದೆ. ಇದೊಂದು ಸಂಘಟಿತ ಕೃತ್ಯವಾಗಿದ್ದು, ಮೋಟೆಗಾಂವ್ಕರ್ ಅದರ ಸಕ್ರಿಯ ಸದಸ್ಯನಾಗಿದ್ದಾನೆ ಎಂದು ಸಿಬಿಐ ಆರೋಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2026ರ ಏಪ್ರಿಲ್ 23ರಂದು ನಡೆಯಬೇಕಿದ್ದ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಉತ್ತರಗಳನ್ನು ಇತರ ಆರೋಪಿಗಳ ಸಹಾಯದೊಂದಿಗೆ ಮೋಟೆಗಾಂವ್ಕರ್ ಅವರು ಪಡೆದುಕೊಂಡಿದ್ದರು. ನಂತರ ಅದನ್ನು ಹಲವರಿಗೆ ಹಂಚಲಾಗಿದೆ ಎನ್ನುವುದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries