HEALTH TIPS

ಬೈಜೂಸ್ ಸಂಸ್ಥಾಪಕ ರವೀಂದ್ರನ್‌ಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ನ್ಯಾಯಾಲಯ: ವರದಿ

ನವದೆಹಲಿ: ಬೈಜೂಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಬೈಜು ರವೀಂದ್ರನ್‌ಗೆ ಸಿಂಗಾಪುರ ನ್ಯಾಯಾಲಯ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಬೈಜು ರವೀಂದ್ರನ್‌ಗೆ ಸಿಂಗಾಪುರ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ ಎಂದು Bloomberg ವರದಿ ಮಾಡಿದೆ.

2024ರ ಎಪ್ರಿಲ್‌ನಿಂದ ಅವರ ಆಸ್ತಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ಹೊರಡಿಸಿದ್ದ ಹಲವು ಆದೇಶಗಳನ್ನು ರವೀಂದ್ರನ್ ಉಲ್ಲಂಘಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.

ಸಿಂಗಾಪುರ ನ್ಯಾಯಾಲಯವು, ಬೈಜು ರವೀಂದ್ರನ್ ಅವರಿಗೆ ಅಧಿಕಾರಿಗಳಿಗೆ ಶರಣಾಗುವಂತೆ ಮತ್ತು 67.50 ಲಕ್ಷ ವೆಚ್ಚವನ್ನು ಪಾವತಿಸುವಂತೆ ಸೂಚಿಸಿದೆ. ಇದಲ್ಲದೆ ಬೀಯರ್ ಇನ್ವೆಸ್ಟ್ಕೊ ಪ್ರೈವೇಟ್ ಲಿಮಿಟೆಡ್‌ನ ಕಾನೂನುಬದ್ಧ ಮಾಲಕತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸುವಂತೆ ಆದೇಶಿಸಿದೆ ಎಂದು Bloomberg ವರದಿ ಮಾಡಿದೆ.

ಆದರೆ, ರವೀಂದ್ರನ್ ಸಿಂಗಾಪುರದಲ್ಲಿದ್ದಾರೆಯೇ ಅಥವಾ ಬೇರೆಡೆ ಇದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿಯು ಉಲ್ಲೇಖಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries