ಕಾಸರಗೋಡು: ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜ ಕಾಸರಗೋಡು ಇದರ ಜಿಲ್ಲಾ ಸಮ್ಮೇಳನವು ಮೇ.3 ರಂದು ಭಾನುವಾರ ಬೆಳಗ್ಗೆ 9ಕ್ಕೆ ಉದಯಗಿರಿ ಅಯ್ಯಪ್ಪ ಮಂದಿರ ಪರಿಸರದಲ್ಲಿ ನಡೆಯಲಿದೆ. ಸಮ್ಮೇಳನದಲ್ಲಿ ಸೇವಾ ಸಮಾಜದ ತಾಲೂಕು, ಜಿಲ್ಲಾ ಪದಾಧಿಕಾರಿಗಳು, ಗುರುಸ್ವಾಮಿಗಳು ಹಾಗೂ ಎಲ್ಲಾ ಅಯ್ಯಪ್ಪ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಗಿದೆ. ಸಮ್ಮೇಳನದ ಉದ್ಘಾಟನೆಯನ್ನು ಸಮಾಜದ ರಾಜ್ಯ ಸಮಿತಿ ಕಾರ್ಯದರ್ಶಿ ಜಯಶ್ರೀ ಜಿ. ನಿರ್ವಹಿಸಲಿದ್ದಾರೆ. ರಾಜ್ಯ ಸಮಿತಿ ಕಾರ್ಯದರ್ಶಿ ವಜಿಂತ್ ರಾಮಕೃಷ್ಣನ್ ಅತಿಥಿಗಳಾಗಿ ಉಪಸ್ಥಿತರಿರುವರು.

