HEALTH TIPS

ಮಂಗಳೂರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ

ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.

ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಸ್ವಾಗತಿಸಿದರು.

ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅವರು ಉಪಸ್ಥಿತರಿದ್ದು, ಉಪರಾಷ್ಟ್ರಪತಿಯನ್ನು ಸ್ವಾಗತಿಸಿದರು.

ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ, ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡಿದರು. ರವಿವಾರ ಬೆಳಿಗ್ಗೆ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಬಳಿಕ ಅಮೃತವರ್ಷಿನಿ ಸಭಾಂಗಣದಲ್ಲಿ ಸಿರಿ ಕೈಗಾರಿಕಾ ಪಾರ್ಕ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಹಾಗೂ ಧರ್ಮಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries