HEALTH TIPS

ಗೋವಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನ ನೀಡಿ: ಮುಸ್ಲಿಂ ಸಂಘಟನೆಗಳ ಆಗ್ರಹ

 ನವದೆಹಲಿ: ದೆಹಲಿ, ಜೈಪುರ ಸೇರಿದಂತೆ ಹಲವೆಡೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಆಗ್ರಹಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು. 


ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ಗುಂಪು ಈದ್‌-ಉಲ್‌-ಅಝಾ ಪ್ರಾರ್ಥನೆ ಬಳಿಕ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು.

ಈ ಸಂಬಂಧ ಘೋಷಣೆಗಳನ್ನು ಕೂಗುತ್ತಾ, ಫಲಕ ಮತ್ತು ಪೋಸ್ಟರ್‌ಗಳನ್ನು ಹಿಡಿದು ಮುಸ್ಲಿಂ ಸಮುದಾಯದವರು ರಸ್ತೆಯಲ್ಲಿ ಮೆರವಣಿ ನಡೆಸಿದರು.

ಜಮಿಯತ್ ಉಲಮಾ-ಇ-ಹಿಂದ್ (ಅರ್ಷದ್ ಮದನಿ ಬಣ) ನೀಡಿದ್ದ ಕರೆಯನ್ನು ಬೆಂಬಲಿಸಿ ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲೂ ಕೆಲ ಮುಸ್ಲಿಂ ಸಂಘಟನೆಗಳ ಸದಸ್ಯರು ಇದೇ ರೀತಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

'ಸಹೋದರತ್ವ ಬಲಪಡಿಸುವುದು ಮತ್ತು ದೇಶದಲ್ಲಿ ಶಾಂತಿ, ಸಾಮರಸ್ಯ ಸಾಧಿಸುವುದು ನಮ್ಮ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಮಹತ್ವ ಸ್ಥಾನ ಪಡೆದಿರುವ ಗೋವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ಘೋಷಿಸುವಂತೆ ಈ ಮೂಲಕ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ' ಎಂದು ಪ್ರತಿಭಟನೆನಿರತರು ಹೇಳಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries