ಲಖನೌ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ರೋಹನಾ ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯ ಬೆರಳನ್ನು ಮುರಿದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಶನಿವಾರ ಬೆಳಿಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.
ಗ್ರಾಮದ ನಿವಾಸಿ ರಾಮನಾಥ್ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಗುಪ್ತಾ ತಿಳಿಸಿದ್ದಾರೆ.

