ಕಾಸರಗೋಡು: ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಸಮೂಹ ಸಂಸ್ಥೆಗಳ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ಟೀಚರ್ ದಂಪತಿಯನ್ನು "ಕರುನಾಡ ಕನ್ನಡ ಗಡಿನಾಡು ಪೋಷಕ ರತ್ನ "ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಕಾಭಧ¸ಬz
ಬೆಂಗಳೂರಿನ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕøತಿಕ ಬಳಗ (ರಿ.) ವತಿಯಿಂದ ಹಾವೇರಿಯ ಡಾ. ಬಿ. ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿರುವ ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯುವುದು. ಗಡಿನಾಡು ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸಿ ಬೆಳೆಸಲು ಹಾಗೂ ಕರ್ನಾಟಕ ರಾಜ್ಯಾದ್ಯಂತ ಸಂಪರ್ಕ ಸಾಧಿಸುತ್ತಿರುವ ಮತ್ತು ವಿವಿಧ ವಿನೂತನ ಕನ್ನಡ ಕಾರ್ಯಕ್ರಮಗಳೊಂದಿಗೆ ಕನ್ನಡಪರ ಸಂಘಟನೆಗೆ ಹೊಸ ಆಯಾಮ ಕಲ್ಪಿಸುತ್ತಿರುವ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಸಮೂಹ ಸಂಸ್ಥೆಗಳ ರೂವಾರಿಗಳಾಗಿದ್ದಾರೆ ಎಂದು ಬಳಗ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಡಿ ಮುಡೆಣ್ಣನವರ ಹೇಳಿಕೆಯಲ್ಲಿ ತಿಳಿಸಿದ್ದಾರೆ.


