HEALTH TIPS

ತಮಿಳುನಾಡಿನ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದ ಸಿಎಂ ವಿಜಯ್

 ಚೆನ್ನೈ: ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡಿನ ಟಿವಿಕೆ ಸರ್ಕಾರವು ಸರ್ಕಾರಿ ನೌಕರರು ಮತ್ತು ಶಿಕ್ಷಕರ ತುಟ್ಟಿ ಭತ್ಯೆಯನ್ನು ಶೇ 2ರಷ್ಟು ಹೆಚ್ಚಳ ಮಾಡಿದ್ದಾರೆ.


ಈ ಹೆಚ್ಚಳದ ಬಳಿಕ ತಮಿಳುನಾಡು ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 58ರಿಂದ ಶೇ 60ಕ್ಕೆ ಹೆಚ್ಚಳವಾಗಿದೆ.

ಈ ಪರಿಷ್ಕರಣೆಯು ಜನವರಿ 1 ರಿಂದ ಪೂರ್ವಾನ್ವಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಟ್ಟಿ ಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ₹1,230 ಕೋಟಿ ಹೊರೆಯಾಗಲಿದೆ.

ಅಗತ್ಯವಿರುವ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡುವ ಮೂಲಕ, ಸರ್ಕಾರಿ ಅಧಿಕಾರಿಗಳು, ಶಿಕ್ಷಕರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಕಲ್ಯಾಣಕ್ಕಾಗಿನ ತನ್ನ ಬದ್ಧತೆಯನ್ನು ಸರ್ಕಾರವು ಪುನರುಚ್ಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜನರಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ರೂಪಿಸಲು ಮತ್ತು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವುದಾಗಿ ವಿಜಯ್ ಪ್ರತಿಜ್ಞೆ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಅಧಿಕಾರಿಗಳು ಮತ್ತು ಶಿಕ್ಷಕರು ವಿವಿಧ ಯೋಜನೆಗಳನ್ನು ರೂಪಿಸುವಲ್ಲಿ ಹಾಗೂ ಅವುಗಳನ್ನು ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದೂ ಅದು ತಿಳಿಸಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries