HEALTH TIPS

ಬೆಂಬಲ ನೀಡುವಂತೆ ವಿಜಯ್ ಮನವಿ: ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾಂಗ್ರೆಸ್‌ಗೆ ಬಿಟ್ಟಿದ್ದೇವೆ: ಕೆಸಿ ವೇಣುಗೋಪಾಲ್

 ನಟ-ರಾಜಕಾರಣಿ ವಿಜಯ್ ಅವರ ಪಕ್ಷವಾದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಒಟ್ಟು 108 ಸ್ಥಾನಗಳನ್ನು ಗೆದ್ದಿದೆ. ಟಿವಿಕೆ ಅತಿದೊಡ್ಡ ಪಕ್ಷವಾಗಿದ್ದರೂ, ಅದು ಇನ್ನೂ ಬಹುಮತದ ಕೊರತೆಯನ್ನು ಎದುರಿಸುತ್ತಿದೆ. ಸರ್ಕಾರ ರಚಿಸಲು ವಿಜಯ್‌ಗೆ ಇತರ ಪಕ್ಷಗಳ ಬೆಂಬಲದ ಅಗತ್ಯವಿದೆ. ಏತನ್ಮಧ್ಯೆ, ಕಾಂಗ್ರೆಸ್ ಕೂಡ ಈ ಬಗ್ಗೆ ಸಭೆ ನಡೆಸಿದೆ. ಸಭೆಯ ನಂತರ, ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರ ರಚಿಸಲು ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಹೇಳಿದರು.


ತಮಿಳುನಾಡಿನ ಪರಿಸ್ಥಿತಿಯ ಬಗ್ಗೆ ಪಕ್ಷ ಚರ್ಚಿಸಿದೆ ಎಂದು ಕೆ.ಸಿ. ವೇಣುಗೋಪಾಲ್ ಹೇಳಿದರು. ಟಿವಿಕೆ ಮುಖ್ಯಸ್ಥ ವಿಜಯ್ ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲವನ್ನು ಕೋರಿದ್ದಾರೆ. ನಮಗೆ ಬಿಜೆಪಿ ಸರ್ಕಾರ ಬೇಡ. ಈ ಜನಾದೇಶ ಜಾತ್ಯತೀತ ಸರ್ಕಾರಕ್ಕಾಗಿ, ವಿಜಯ್ ಅವರ ಪಕ್ಷವನ್ನು ಬೆಂಬಲಿಸುವ ಬಗ್ಗೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಖಿಓಅಅ ರಾಜಕೀಯ ವ್ಯವಹಾರಗಳ ಸಮಿತಿಯು  ಬೆಳಿಗ್ಗೆ 9:30ಕ್ಕೆ ಚೆನ್ನೈನಲ್ಲಿ ಸಭೆ ಸೇರಲಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries