HEALTH TIPS

ಮನೆಯೊಳಗೆ ಗಾಂಜಾ ದಾಸ್ತಾನು ಪ್ರಕರಣ-ಆರೋಪಿಗೆ ಕಠಿಣ ಜೈಲು ಶಿಕ್ಷೆ, ದಂಡ

ಕಾಸರಗೋಡು: ಗಾಂಜಾ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿ ಮಂಗಲ್ಪಾಡಿ ಬೈತಲ ನಿವಾಸಿ ಮೊಹಮ್ಮದ್ ಬಾದಿಷಾ ಕೆ.ಎಸ್ (42) ಎಂಬಾತನಿಗೆ  ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ) ಒಂದು ವರ್ಷ ಕಠಿಣ ಸಜೆ ಹಾಗೂ 20,000 ರೂ. ದಂಡವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಆರೋಪಿ ಎರಡು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.

2020 ಜುಲೈ 5ರಂದು ಸಂಜೆ ಕುಂಬಳೆ ಠಾಣೆ ಪೆÇಲೀಸರು ನಿರ್ಮಾಣ ಹಂತದಲ್ಲಿರುವ ಆರೋಪಿಯ ಮನೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮನೆಯೊಳಗಿಂದ 4.2 ಕಿಲೋ ಗ್ರಾಂ ಗಾಂಜಾ ಪತ್ತೆಹಚ್ಚಿ ವಶಪಡಿಸಿಕೊಂಡು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಕುಂಬಳೆ ಠಾಣೆಯ ಇನ್ಸ್‍ಪೆಕ್ಟರ್ ಆಗಿದ್ದ ಸಂತೋಷ್ ಕುಮಾರ್ ನೇತೃತ್ವದ ಪೆÇಲೀಸರು ಕಾರ್ಯಾಚರಣೆ ನಡೆಸಿದ್ದರು.

ಈ ಪ್ರಕರಣದ ಬಗ್ಗೆ ನಂತರ ಕುಂಬಳೆ ಠಾಣೆಯ ಇನ್ಸ್‍ಪೆಕ್ಟರ್ ಆಗಿದ್ದ ಪಿ. ಪ್ರಮೋದ್ ಮುಂದಿನ ಹಂತದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೆÇ್ರಸಿಕ್ಯೂಶನ್ ಪರ ಹೆಚ್ಚುವರಿ ಸರ್ಕಾರಿ ಪಬ್ಲಿಕ್ ಪ್ರೊಸಿಕ್ಯೂಟರ್ ಚಂದ್ರಮೋಹನ್. ಜಿ ಮತ್ತು ವಕೀಲೆ ಚಿತ್ರಕಲಾ ನ್ಯಾಯಾಲಯದಲ್ಲಿ ವಾದಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries