ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಗಳ ಸಂಖ್ಯೆಯನ್ನು 34ರಿಂದ 38ಕ್ಕೆ (ಮುಖ್ಯ ನ್ಯಾಯಮೂರ್ತಿ ಸೇರಿ) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಮಂಗಳವಾರ ನಿರ್ಧರಿಸಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ 33 ನ್ಯಾಯಮೂರ್ತಿಗಳು ಮತ್ತು ಮುಖ್ಯ ನ್ಯಾಯಮೂರ್ತಿ ಇದ್ದಾರೆ.
ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಿಸಲು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ಮಸೂದೆಗೆ ಸಂಸತ್ತಿನಿಂದ ಅನುಮೋದನೆ ಸಿಕ್ಕ ಬಳಿಕ, ನ್ಯಾಯಮೂರ್ತಿಗಳ ಸಂಖ್ಯೆ 38ಕ್ಕೆ ಏರಲಿದೆ.
ಈ ಸಂಖ್ಯೆ ಹೆಚ್ಚಳವು ತ್ವರಿತ ನ್ಯಾಯವನ್ನು ಖಾತರಿಪಡಿಸುತ್ತದೆ ಎಂದು ಅವರು ಹೇಳಿದರು.

