HEALTH TIPS

ನೀಟ್‌ ಮರುಪರೀಕ್ಷೆ: ಪ್ರಶ್ನೆಪತ್ರಿಕೆ ಸೋರಿಕೆ ಆಗದಂತೆ ಕ್ರಮ ಎಂದ ಪ್ರವೀಣ್‌ ಸೂದ್‌

ನವದೆಹಲಿ: ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಆಗಿರುವ ಪ್ರಗತಿ ಮತ್ತು ಸೋರಿಕೆಯ ಹಿಂದಿರುವ ಆರೋಪಿಗಳನ್ನು ಬಂಧಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಸಿಬಿಐ ನಿರ್ದೇಶಕ ಪ್ರವೀಣ್‌ ಸೂದ್‌ ಅವರು ಸಂಸದೀಯ ಸ್ಥಾಯಿ ಸಮಿತಿಗೆ ಶುಕ್ರವಾರ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್‌ ಜೋಶಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಅಭಿಷೇಕ್‌ ಸಿಂಗ್‌ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಅಧ್ಯಕ್ಷ ಅಭಿಜಾತ್‌ ಚಂದ್ರಕಾಂತ್‌ ಶೇಠ್‌ ಸೇರಿದಂತೆ ಅಧಿಕಾರಿಗಳು ಸಮಿತಿ ಮುಂದೆ ಹಾಜರಾದರು.

ಜೂನ್‌ 21ರಂದು ನಡೆಯಲಿರುವ ನೀಟ್‌-ಯುಜಿ ಮರುಪರೀಕ್ಷೆಯಲ್ಲಿ ಯಾವುದೇ ಸೋರಿಕೆ ಅಥವಾ ದುಷ್ಕೃತ್ಯ ನಡೆಯದಂತೆ ತಡೆಗಟ್ಟಲು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಧಿಕಾರಿಗಳು ಸಮಿತಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೈದ್ಯಕೀಯ ಪ್ರವೇಶದ ಸೀಟ್‌ ಮ್ಯಾಟ್ರಿಕ್ಸ್‌ಗೆ ತೊಂದರೆಯಾಗದಂತೆ ಮತ್ತು ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯುವ ವಿದ್ಯಾರ್ಥಿಗಳ ಕೌನ್ಸೆಲಿಂಗ್‌ ಅನ್ನು ಸಮಯಕ್ಕೆ ಸರಿಯಾಗಿ ನಡೆಸುವಂತೆ ಸಮಿತಿಯು ಅಧಿಕಾರಿಗಳಿಗೆ ಸೂಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries