ಕಾಸರಗೋಡು: ಕೇರಳ ರಾಜ್ಯದಾದ್ಯಂತ ಜೂ. 1 ರಂದು ಶಾಲಾ ತರಗತಿ ಪುನರಾರಂಭಗೊಳ್ಳಲಿದ್ದು, ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ ಚಾಯೋತ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಲಿದೆ.
ಕಾರ್ಯಕ್ರಮದ ಯಶಸ್ಸಿಗಾಗಿ ಸ್ವಾಗತ ಸಮಿತಿ ರಚನಾಸಭೆ ಶಾಲೆಯಲ್ಲಿ ಜರುಗಿತು. ಸಭೆಯನ್ನು ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಮನು ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಡಾ. ಸೆರೆನಾ ಸಲಾಂ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪಿ.ಮನೋಹರನ್, ಪ್ರಾಂಶುಪಾಲೆ ಸೀಮಾ. ಕೆ.ಟಿ, ಶಾಲಾ ಮುಖ್ಯ ಶಿಕ್ಷಕ ಸುನಿಲ್ ಕುಮಾರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಕುಮಾರನ್, ಎಸ್.ಎಂ.ಸಿ ಅಧ್ಯಕ್ಷ ಕೆ. ಸತ್ಯನ್ ಮೊದಲಾದವರು ಉಪಸ್ಥಿತರಿದ್ದರು.
ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಅಧ್ಯಕ್ಷರಾಗಿರುವ ಸ್ವಾಗತ ಸಮಿತಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಚಾಯೋತ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಶಾಲಾ ಪ್ರವೇಶೋತ್ಸವ ಸಮಾರಂಭವನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.



