ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶಕ್ಕಾಗಿ ನೋಂದಣಿ ಆರಂಭಗೊಂಡಿದ್ದು, ಅಭ್ಯರ್ಥಿಗಳು ಜೂನ್ 10 ರವರೆಗೆ ವಿಶ್ವವಿದ್ಯಾಲಯದ ವೆಬ್‍ಸೈಟ್ ತಿತಿತಿ.ಛಿuಞeಡಿಚಿಟಚಿ.ಚಿಛಿ.iಟಿ ಗೆ ಭೇಟಿ ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‍ಟಿಯು) ದೇಶದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಯುಟಿ-ಪಿಜಿ) ಬರೆದವರಿಗೆ ನೋಂದಣಿ ಮುಕ್ತವಾಗಿದೆ.
ತಾತ್ಕಾಲಿಕ ರ್ಯಾಂಕ್ ಪಟ್ಟಿಯನ್ನು ಜೂನ್ 19 ರಂದು ಪ್ರಕಟಿಸಲಾಗುವುದು. ಜೂನ್ 22 ಮತ್ತು 23 ರಂದು ದೂರುಗಳನ್ನು ಸಲ್ಲಿಸಬಹುದು. ವಿಶ್ವವಿದ್ಯಾಲಯವು 27 ಸ್ನಾತಕೋತ್ತರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕ 500 ರೂ. ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ(04672 2309467-ಇಮೇಲ್: admissions@cukerala.ac.in)¸ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

