HEALTH TIPS

ಇಂದು ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ, ಕೃತಿಪರಿಚಯ

ಉಪ್ಪಳ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ  ಹಾಗೂ ಶಾಫಿ ಬಂಡಸಾಲೆ ಅವರ ಕೃತಿ ಪರಿಚಯ ಕಾರ್ಯಕ್ರಮ  ಇಂದು ಮೇ 30ರಂದು ಬೆಳಗ್ಗೆ 10ಕ್ಕೆ ಉಪ್ಪಳ ವ್ಯಾಪಾರಿ ಭವನದಲ್ಲಿ ಜರುಗಲಿದೆ. 

ಮಂಗಳೂರು ಮೆಸ್ಕಾಂ ಅಧ್ಯಕ್ಷ, ಮಜಿ ಶಾಸಕ ಕೆ. ಹರೀಶ್ ಕುಮಾರ್ ಉದ್ಘಾಟಿಸುವರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸುವರು. ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಉಳಿಯತ್ತಡ್ಕ ಕೃತಿಪರಿಚಯ ನಡೆಸುವರು. ಈ ಸಂದರ್ಭ ಲೇಖಕ ಶಾಫಿ ಬಮಡಸಾಲೆ ಅವರನ್ನು ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಸನ್ಮಾನಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಮಂಗಲ್ಪಾಡಿ ಗ್ರಾಮ ಪಂಚಾಯತ್  ಅಧ್ಯಕ್ಷ ಗೋಲ್ಡನ್ ರಹ್ಮಾನ್, ಕಲ್ಕೂರ ಸಂಸ್ಥಾಪಕರು, ಕಾಸರಗೋಡಿನ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಸಮಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ  ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕಾಸರಗೋಡು ಗಮಕ ಕಲಾ ಪರಿಷತ್ತು, ಅಧ್ಯಕ್ಷ   ತೆಕ್ಕೇರಿ ಶಂಕರನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತೆ ಸುಜಾತಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 




 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries