ದುಬೈ: ಬಂದರ್ ಅಬ್ಬಾಸ್ ಬಳಿ ನಡೆದ ದಾಳಿಗೆ ಪ್ರತೀಕಾರವಾಗಿ ಕುವೈತ್‌ನಲ್ಲಿರುವ ಅಮೆರಿಕದ ವಾಯು ನೆಲೆಯನ್ನು ಗುರಿಯಾಗಿಸಿ ಇರಾನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಅಮೆರಿಕ ನೆಲೆಗಳನ್ನು ಗುರಿಯಾಗಿಸಿ ನಡೆಸಿರುವ ದಾಳಿಯನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕೋರ್ (ಐಆರ್‌ಜಿಸಿ) ಖಚಿತಪಡಿಸಿದೆ.
ಅಮೆರಿಕ ಇರಾನ್ ನಡುವೆ ಕದನ ವಿರಾಮ ಹಾಗೂ ಶಾಂತಿ ಒಪ್ಪಂದ ಅಂತಿಮ ಹಂತಕ್ಕೆ ತಲುಪಿರುವ ಮಧ್ಯೆ ದಾಳಿ ನಡೆದಿದ್ದು, ಅನಿಶ್ಚಿತತೆ ಮುಂದುವರಿದಿದೆ.
ಈ ಮೊದಲು ಕರಾವಳಿ ನಗರಿ ಬಂದರ್ ಅಬ್ಬಾಸ್‌ನಲ್ಲಿ ಇರಾನ್ ಮಿಲಿಟರಿ ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿತ್ತು.
ಮತ್ತೊಂದೆಡೆ ಅಮೆರಿಕ-ಇರಾನ್ ಸಂಘರ್ಷದಿಂದಾಗಿ ಜಾಗತಿಕ ಬಿಕ್ಕಟ್ಟು ಮುಂದುವರಿದಿದ್ದು, ತೈಲ ಬೆಲೆ ಏರಿಕೆಯಾಗಲು ಕಾರಣವಾಗಿದೆ.
ತನ್ನ ವಾಯು ರಕ್ಷಣಾ ವ್ಯವಸ್ಥೆಯು ವೈರಿಗಳ ಕ್ಷಿಪಣಿ ಹಾಗೂ ಡ್ರೋನ್ ದಾಳಿಯನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಕುವೈತ್ ಸೇನೆ ತಿಳಿಸಿದೆ. ಆದರೆ ಎಲ್ಲಿಂದ ದಾಳಿ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ.

